ಲಖಿಂಪುರ್ ಖೇರಿ ಹಿಂಸಾಚಾರ: ಸಾವಿನ ಸಂಖ್ಯೆ 8 ಕ್ಕೆ ಏರಿಕೆ, ರೈತರಿಂದ ಸಚಿವರ ಮಗನ ವಿರುದ್ಧ ರೈತರ ಮೇಲೆ ಕಾರು ಓಡಿಸಿದ ಆರೋಪ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಎಂಟು ಜನರು ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಉಪಮುಖ್ಯಮಂತ್ರಿ ಕೇಶವ ಮೌರ್ಯ ಅವರ ಭೇಟಿ ಸಂದರ್ಭದಲ್ಲಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದರು.
ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದಾರೆ ಎಂದು ಲಖಿಂಪುರ್ ಖೇರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅರುಣ್ ಕುಮಾರ್ ಸಿಂಗ್ ಹೇಳಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾದವರು ಮೂವರು ರೈತರಲ್ಲಿ ಒಬ್ಬರನ್ನು ಮೋಎಸ್ ಅಜಯ್ ಮಿಶ್ರಾ ತೇನಿ ಮಗ ಆಶಿಶ್ (ಮೋನು) ಮಿಶ್ರಾ ಗುಂಡಿಕ್ಕಿ ಕೊಂದಿದ್ದಾರೆ, ಮತ್ತು ಇತರರು ಲಖಿಂಪುರ್ ಖೇರಿಯಲ್ಲಿ ಅವರ ವಾಃನಗಳು ಹಾಯ್ದು ಮೃತಪಟ್ಟಿದ್ದಾರೆ ಆರೋಪಿಸಲಾಗಿದೆ.
ಲಕ್ನೋ: ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭಾನುವಾರ ಟಿಕೊನಿಯಾ-ಬನ್ಬೀರ್‌ಪುರ ರಸ್ತೆಗೆ ಭೇಟಿ ನೀಡುವುದಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಪ್ರತಿಭಟನಾಕಾರರ ಗುಂಪಿನ ಮೇಲೆ ಎರಡು ಎಸ್‌ಯುವಿಗಳು ಹಾಯ್ದ ಪರಿಣಾಮ ಇಬ್ಬರು ರೈತರು ಮೃತಪಟ್ಟ ನಂತರ ಹಿಂಸಾಚಾರ ಆರಂಭವಾಯಿತು. ಹಾಗೂ ಪರಿಸ್ಥಿತಿ ಉದ್ವಿಗ್ನತೆಯಿಂದ ಕೂಡಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ, ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ಪ್ರತಿಭಟನಾ ನಿರತ ರೈತರ ಮೇಲೆ ತಮ್ಮ ಕಾರಿನ ಮೇಲೆ ಓಡಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಘಟನೆಯಿಂದಾಗಿ ಇಬ್ಬರು ರೈತರುಮೃತಪಟ್ಟಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಲಖಿಂಪುರ್ ಖೇರಿಯಲ್ಲಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ತಂದೆಯ ಗ್ರಾಮವಾದ ಟಿಕುನಿಯಾದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುನ್ನ ರೈತರು ಕೇಂದ್ರದ ಮೂರು ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿದ್ದರು.
ಸ್ಥಳೀಯರ ಪ್ರಕಾರ, ಪ್ರತಿಭಟನಾಕಾರರು ಉಪ ಮುಖ್ಯಮಂತ್ರಿಗೆ ಕಪ್ಪು ಬಾವುಟಗಳನ್ನು ತೋರಿಸಲು ಯೋಜಿಸಿದ್ದರು. ಆಶಿಶ್ ಮಿಶ್ರಾ ಅವರು ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಬರಮಾಡಿಕೊಳ್ಳಲು ಹೋಗುತ್ತಿದ್ದಾಗ ಅವರ ಕಾರಿನ ಮುಂದೆ ಪ್ರತಿಭಟನಾ ನಿರತ ರೈತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸಚಿವರ ಮಗ ಪ್ರತಿಭಟನಾ ನಿರತ ರೈತರ ಮೇಲೆ ತನ್ನ ಕಾರನ್ನು ಚಲಾಯಿಸಿದಾಗ ಹೀಗಾಯಿತು ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಆರೋಪಿಸಿದೆ. ಈ ಘಟನೆಯಲ್ಲಿ ಇಬ್ಬರು ಅಲ್ಲ, ಮೂವರು ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ಕಿಸಾನ್‌ ಯೂನಿಯನ್ ಹೇಳಿಕೊಂಡಿದೆ.
‌ ಕಾರು ಸುಟ್ಟ ರೈತರು..”:
ತರುವಾಯ, ಆಕ್ರೋಶಗೊಂಡ ರೈತರು ಘಟನೆಯ ನಂತರ ಆಶಿಶ್ ಮಿಶ್ರಾ ಅವರ ಒಂದು ಕಾರು ಸೇರಿದಂತೆ ಮೂರು ಕಾರುಗಳನ್ನು ಸುಟ್ಟುಹಾಕಿದರು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ ನಂತರ ಟಿಕುನಿಯಾದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಹಾಯಕ ನಿರ್ದೇಶಕ ಮಹಾನಿರ್ದೇಶಕ (ಎಡಿಜಿ) ಪ್ರಶಾಂತ್ ಕುಮಾರ್ ಅವರಿಗೆ ಲಖಿಂಪುರ್ ಖೇರಿ ತಲುಪಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸೂಚಿಸಿದ್ದಾರೆ.
ಲಖಿಂಪುರ್ ಖೇರಿಯ ಟಿಕುನಿಯಾಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ಕಳುಹಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. “ಇತರ ಜಿಲ್ಲೆಗಳ ಅಧಿಕಾರಿಗಳನ್ನು ಕೂಡ ಸ್ಥಳಕ್ಕೆ ಕಳುಹಿಸಲಾಗಿದೆ. ಐಜಿ ರೇಂಜ್ ಲಕ್ನೋ ಲಕ್ಷ್ಮಿ ಸಿಂಗ್ ಮತ್ತು ಎಡಿಜಿ ಕಾನೂನು ಮತ್ತು ಸುವ್ಯವಸ್ಥೆ ಲಖಿಂಪುರದಲ್ಲಿ ಬೀಡುಬಿಡುತ್ತದೆ” ಎಂದು ಡಿಜಿಪಿ ಹೇಳಿದರು.
ಬಿಕೆಯು ನಾಯಕ ರಾಕೇಶ್ ಟಿಕೈಟ್ ಕೂಡ ಗಾಜಿಪುರದಿಂದ ಲಖಿಂಪುರ್ ಖೇರಿಗೆ ತೆರಳಿದ್ದಾರೆ.
ಏತನ್ಮಧ್ಯೆ, ಬಿಕುಯುನ (ಚದುನಿ) ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ ಟಿಕುನಿಯಾದಲ್ಲಿ ಬೃಹತ್ ಸಮಾವೇಶಕ್ಕೆ ಕರೆ ನೀಡಿದ್ದಾರೆ.
ನನ್ನ ಮಗ ಇಲ್ಲ ಎಂದು ಸಚಿವರು..”:
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರು ಪುತ್ರ ಆಶಿಶ್ ಮಿಶ್ರಾ ವಿರುದ್ಧದ ಆರೋಪವನ್ನು ನಿರಾಕರಿಸಿದ್ದಾರೆ. “ನನ್ನ ಮಗ ಘಟನೆ ನಡೆದ ಸ್ಥಳಕ್ಕೆ ಹತ್ತಿರದಲ್ಲಿ ಇರಲಿಲ್ಲ” ಎಂದು ಸಚಿವರು ತಿಳಿಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಕೆಲವು “ಸಮಾಜ ವಿರೋಧಿ ಅಂಶಗಳು” ಮೊದಲು ಪ್ರಚೋದನೆ ಮತ್ತು ದಾಳಿ ನಡೆಸಿದೆ ಎಂದು ಅವರು ಆರೋಪಿಸಿದರು, “ಇದರಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡಿತು”. ಈ ಘಟನೆಯಲ್ಲಿ ಮೂರ್ನಾಲ್ಕು ಬಿಜೆಪಿ ಕಾರ್ಯಕರ್ತರು ಕೂಡ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ನಾನು ಅಥವಾ ನನ್ನ ಮಗ ಘಟನೆಯ ಸಮೀಪದಲ್ಲಿರಲಿಲ್ಲ” ಎಂದು ಸಚಿವ ಅಜಯ್ ಮಿಶ್ರಾ ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ