ಡ್ರಗ್ಸ್​ ಕೇಸ್​ನಲ್ಲಿ ಬಾಲಿವುಡ್‌ ನಟ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಬಂಧನ

ಮುಂಬೈ: ಡ್ರಗ್ಸ್​​ ಪಾರ್ಟಿಗೆ ತೆರಳಿದವರಲ್ಲಿ ಬಾಲಿವುಡ್‌ ನಟ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದ ಎನ್​ಸಿಬಿ ಅಧಿಕಾರಿಗಳು ಈಗ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.
ಇದರಿಂದ ನಟ ಶಾರುಖ್​ ಖಾನ್​ಗೆ ಸಂಕಷ್ಟ ಹೆಚ್ಚಿದೆ.
ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದು ಅಲ್ಲಿಂದ ಅವರನ್ನು ಎನ್​ಸಿಬಿ ಕಚೇರಿಗೆ ಕರೆದುಕೊಂಡು ಬರಲಾಯಿತು. ಎನ್​ಸಿಬಿ ಕಚೇರಿ ಒಳಗೆ ಆರ್ಯನ್​ ಅವರಿಗೆ ವಿಚಾರಣೆ ವೇಳೆ ಪ್ರಶ್ನೆಯನ್ನು ಮಾಡಲಾಯಿತು. ಈಗ ಅವರನ್ನು ಬಂಧಿಸಲಾಗಿದೆ.​
ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್​ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿಲ್ಲ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಬಾಲಿವುಡ್​ನಲ್ಲಿ ಹರಡಿರುವ ಡ್ರಗ್ಸ್​ ಜಾಲವನ್ನು ಭೇದಿಸಲು ಈ ದಾಳಿ ಹೆಚ್ಚು ಸಹಕಾರಿ ಆಗಲಿದೆ ಎಂದು ಹೇಳಲಾಗುತ್ತಿದೆ.
ಆರ್ಯನ್​ ಖಾನ್​ ಲಂಡನ್​ನ ‘ಸೆವೆನ್​ ಓಕ್ಸ್​ ಹೈಸ್ಕೂಲ್​’ನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಕಳೆದ ವರ್ಷ, ಅಂದರೆ 2020ರಲ್ಲಿ ಫೈನ್​ ಆರ್ಟ್ಸ್​, ಸಿನಿಮ್ಯಾಟಿಕ್​ ಆರ್ಟ್ಸ್​, ಫಿಲ್ಮ್​ ಮತ್ತು ಟೆಲಿವಿಷನ್​ ಪ್ರೊಡಕ್ಷನ್​ ವಿಷಯಗಳಲ್ಲಿ ಅವರು ಪದವಿ ಪಡೆದಿದ್ದಾರೆ.ದಿ ಲಯನ್​ ಕಿಂಗ್​’ ಸಿನಿಮಾದ ಹಿಂದಿ ಅವತರಣಿಕೆಯನ್ನು ಅವರು ಡಬ್ಬಿಂಗ್​ ಮಾಡಿದ್ದರು. ಅಲ್ಲದೆ ಚಿಕ್ಕ ವಯಸ್ಸಿನಲ್ಲಿದ್ದಾಗ ಕೆಲವು ಸಿನಿಮಾಗಳಲ್ಲೂ ಅವರು ಕಾಣಿಸಿಕೊಂಡಿದ್ದರು. ಶಾರುಖ್​ ನಟನೆಯ ‘ಕಭಿ ಅಲ್ವಿದಾ ನಾ ಕೆಹನಾ’, ‘ಕಭಿ ಖುಷಿ ಕಭಿ ಗಮ್​’ ಸಿನಿಮಾದ ಸಣ್ಣ-ಪುಟ್ಟ ದೃಶ್ಯಗಳಲ್ಲಿ ಅವರು ಬಂದುಹೋಗಿದ್ದರು. ‘ಧೂಮ್​’ ಸರಣಿಯ ಮುಂಬರುವ ಚಿತ್ರಕ್ಕೆ ಆರ್ಯನ್​ ಖಾನ್​ ಹೀರೋ ಆಗುತ್ತಾರೆ ಎಂಬ ಸುದ್ದಿಯೂ ಕೇಳಿಬಂದಿತ್ತು. ಹೀಗಿರುವಾಗಲೇ ಅವರ ಬಂಧನವಾಗಿದೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಮುಖ ಸುದ್ದಿ :-   ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement