ಭಟ್ಕಳ: ವೆಂಕಟಾಪುರ ಹೊಳೆಯಲ್ಲಿ ಮೊಸಳೆ ಪ್ರತ್ಯಕ್ಷ, ಆತಂಕ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ಹೊಳೆಯ ನೀರಕಂಠದ ಸಮೀಪದಲ್ಲಿ ಹೊಳೆ ನಡುವೆ ದಿಬ್ಬದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
ವೆಂಕಟಾಪುರ ನದಿಯ ಈ ಪ್ರದೇಶದಲ್ಲಿ ಇದು ಮೊದಲ ಬಾರಿಗೆ ಕಾಣಿಸಿಕೊಂಡಿದೆ. ಶುಕ್ರವಾರ ಸಂಜೆಯ ಸಮಯ ಮರಳು ದಿಬ್ಬದ ಮೇಲೆ ಮಲಗಿದ್ದ ಮೊಸಳೆಯನ್ನು ಕಂಡಿದ್ದ ಸ್ಥಳೀಯರು ಪೋಟೋ ಕ್ಲಿಕ್ಕಿಸಿದ್ದು, ಶನಿವಾರ ಮಧ್ಯಾಹ್ನದ ವೇಳೆಗೆ ಮೊಸಳೆ ಅದೇ ಮರಳು ದಿಬ್ಬದ ಮೇಲೆ ಮತ್ತೆ ಕಾಣಿಸಿಕೊಂಡಿದೆ. ಸುಮಾರು 5ರಿಂದ 6 ಅಡಿಯಷ್ಟು ಉದ್ದವಿರುವ ಮೊಸಳೆ ಎರಡು ದಿನಗಳಿಂದಲೂ ಕಾಣಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.
ಮೊಸಳೆ ಕಾಣಿಸಿಕೊಂಡಿದ್ದನ್ನು ಅರಣ್ಯ ಇಲಾಖೆಯ ಗಮನಕ್ಕೆ ಸಾರ್ವಜನಿಕರು ತಂದಿದ್ದು ಅರಣ್ಯ ಇಲಾಖೆ ಮೊಸಳೆಯನ್ನು ಹಿಡಿದು ಬೇರೆಡೆಗೆ ಸಾಗಿಸುವುದಕ್ಕೆ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿದ್ದಾರೆ

0 / 5. 0

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement