ಭವಾನಿಪುರದಲ್ಲಿ 50 ಸಾವಿರಕ್ಕೂ ಅಧಿಕ ಮತಗಳಿಂದ ಮಮತಾ ಬ್ಯಾನರ್ಜಿ ಭರ್ಜರಿ ಜಯ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ,
ಅವರ ಎದುರಾಳಿ ಅಭ್ಯರ್ಥಿ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಭರ್ಹರಿ ಅಂತರದಿಂದ ಸೋಲಿಸಿದ್ದಾರೆ. ಅಂತಿಮ ಸುತ್ತಿನ ಮತ ಎಣಿಕೆ ಭಬಾನಿಪುರದಲ್ಲಿ ಮುಕ್ತಾಯವಾಗುತ್ತಿದ್ದಂತೆ, ಮಮತಾ ಬ್ಯಾನರ್ಜಿ 58,000 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಭವಾನಿಪುರದಲ್ಲಿ 21 ನೇ ಸುತ್ತಿನ ಹಾಗೂ ಕೊನೆಯ ಮತ ಎಣಿಕೆ ಮುಕ್ತಾಯಗೊಂಡಾಗ, ಮಮತಾ ಬ್ಯಾನರ್ಜಿ ಒಟ್ಟು 84,000 ಮತಗಳನ್ನು ಪಡೆದಿದ್ದಾರೆ, ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಒಟ್ಟು 26,000 ಮತಗಳನ್ನು ಗಳಿಸಿದ್ದಾರೆ.
ಭವಾನಿಪುರ ಉಪಚುನಾವಣೆಗಳು ಪಶ್ಚಿಮ ಬಂಗಾಳ ಮುಖ್ಯಮಂತ್ರಿಗೆ ನಿರ್ಣಾಯಕವಾಗಿದ್ದು, ಅವರು ಉಳಿದ ಅವಧಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಉಳಿಯಲು ಈ ಕ್ಷೇತ್ರದಿಂದ ಒಂದು ಸ್ಥಾನವನ್ನು ಗೆಲ್ಲಬೇಕು. ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮ ಚುನಾವಣೆಯಲ್ಲಿ ಸೋತಿದ್ದರು.
ಭವಾನಿಪುರ ಉಪಚುನಾವಣೆಯನ್ನು ಸೆಪ್ಟೆಂಬರ್ 30 ರಂದು ನಡೆಸಲಾಯಿತು,ಶೇ. 53 ರಷ್ಟು ಮತದಾನವಾಗಿತ್ತು. ಮತದಾನದ ದಿನ, ಸೆಪ್ಟೆಂಬರ್ 30, ಭವಾನಿಪುರ ಕ್ಷೇತ್ರದ ಕೆಲವು ಪ್ರದೇಶಗಳಿಂದ ಘರ್ಷಣೆಯ ಹಲವು ಘಟನೆಗಳು ವರದಿಯಾಗಿವೆ. ಇಸಿ 97 ದೂರುಗಳನ್ನು ಸ್ವೀಕರಿಸಿದ್ದು, ಅದರಲ್ಲಿ 91 ದೂರುಗಳನ್ನು ರದ್ದುಗೊಳಿಸಲಾಗಿದೆ.
ಮತದಾನ ಪ್ರಕ್ರಿಯೆಯ ಸುತ್ತಲಿನ ಯಾವುದೇ ಗೊಂದಲ ಅಥವಾ ಹಿಂಸಾಚಾರವನ್ನು ತಡೆಗಟ್ಟಲು ಚುನಾವಣಾ ಆಯೋಗವು ನೀಡಿದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಕೋಲ್ಕತ್ತಾ ಪೊಲೀಸರು ಈ ಪ್ರದೇಶದಲ್ಲಿ ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ. ಉಪಚುನಾವಣೆಗಾಗಿ ಯಾವುದೇ ಚುನಾವಣೋತ್ತರ ಹಿಂಸಾಚಾರ ವರದಿಗಳನ್ನು ತಡೆಗಟ್ಟಲು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಚುನಾವಣಾ ಆಯೋಗ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿತ್ತು.

ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement