ಮುಂದಿನ ವರ್ಷದಿಂದ ಪ್ರಾಥಮಿಕಪ್ರೌಢ ಶಿಕ್ಷಣದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ : ಶಿಕ್ಷಣ ಸಚಿವ ನಾಗೇಶ

ಮೈಸೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲೂ ಜಾರಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು.
ಈ ವರದಿಯಾಧರಿಸಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ನೂತನ ಶಿಕ್ಷಣ ನೀತಿ ಜಾರಿ ಮಾಡಲಾಗುವುದು. ಮುಂದಿನ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಲ್ಲಿ ಹೊಸ ನೀತಿ ಜಾರಿಗೆ ತರಲಾಗುವುದು ಎಂದರು.
ರಾಜ್ಯದಲ್ಲಿ ಈಗಾಗಲೇ ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ಬರುವ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದರು.
ಪಠ್ಯ ಕ್ರಮ ಪರಿಶೀಲನೆ
ರಾಜ್ಯದಲ್ಲಿ ೧ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ೪ ಹಂತಗಳ ಶಿಕ್ಷಣ ಪಠ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement