ಭಾರತದಲ್ಲಿ 22,842 ಹೊಸ ಕೋವಿಡ್ -19 ಪ್ರಕರಣಗಳು ವರದಿ.. ಇದು ನಿನ್ನೆಗಿಂತ 6.2% ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 22,842 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆಗಿಂತ ಶೇಕಡಾ 6.2 ರಷ್ಟು ಕಡಿಮೆಯಾಗಿದೆ. ಇದರೊಂದಿಗೆ, ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,38,13,903 ಕ್ಕೆ ತಲುಪಿದೆ. ಶನಿವಾರದ 24,354 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿತ್ತು. ಇದು ಶುಕ್ರವಾರ ದಾಖಲಾದ ಪ್ರಕರಣಗಳಿಗಿಂತ ಶೇಕಡಾ 8.9 ರಷ್ಟು ಕಡಿಮೆಯಾಗಿದೆ. … Continued

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಬಾಲಿವುಡ್‌ ಸ್ಟಾರ್‌ ಶಾರುಖ್ ಪುತ್ರ ಆರ್ಯನ್ ಖಾನ್ ವಿಚಾರಣೆ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮುಂಬೈ ಡ್ರಗ್ ಬಸ್ಟ್ ಪ್ರಕರಣದಲ್ಲಿ ಕಾರ್ಡೆಲಿಯಾ ಕ್ರೂಸ್ ಎಂಪ್ರೆಸ್ ಹಡಗಿನಲ್ಲಿ ಪ್ರಶ್ನಿಸುತ್ತಿದೆ ಎಂದು ವರದಿಯಾಗಿದೆ. ಮುಂಬೈ ಕರಾವಳಿಯಲ್ಲಿ ಶನಿವಾರ ರಾತ್ರಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಆರ್ಯನ್ ಖಾನ್ ಅವರನ್ನು ಎನ್‌ಸಿಬಿ ಪ್ರಶ್ನಿಸುತ್ತಿದೆ. ಆರ್ಯನ್ … Continued

ಶೆಟ್ಟರ ಹೇಳಿಕೆಯಲ್ಲಿ ವಾಸ್ತವಾಂಶವಿಲ್ಲ, ಓಬಿಸಿ ಜಾತಿ ಗಣತಿ ಬಹಿರಂಗಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಏಕೆ ಮುಂದಾಗುತ್ತಿಲ್ಲ: ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ಹಿಂದುಳಿದ ವರ್ಗಗಳ ಜಾತಿ ಗಣತಿ ವರದಿ ಬಹಿರಂಗಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಏಕೆ ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಪ್ರಶ್ನಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಜಗದೀಶ ಶೆಟ್ಟರ ಅವರು ಅನೇಕ ವರ್ಷಗಳಿಂದ ರಾಜಕೀಯದಲ್ಲಿದ್ದವರು. ಸಂಪುಟ ಸಚಿವರು ಹಾಗೂ ಮುಖ್ಯಮಂತ್ರಿಗಳೂ ಆಗಿದ್ದರು. ಹಿಂದುಳಿದ … Continued

ಭಟ್ಕಳ: ವೆಂಕಟಾಪುರ ಹೊಳೆಯಲ್ಲಿ ಮೊಸಳೆ ಪ್ರತ್ಯಕ್ಷ, ಆತಂಕ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ಹೊಳೆಯ ನೀರಕಂಠದ ಸಮೀಪದಲ್ಲಿ ಹೊಳೆ ನಡುವೆ ದಿಬ್ಬದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ವೆಂಕಟಾಪುರ ನದಿಯ ಈ ಪ್ರದೇಶದಲ್ಲಿ ಇದು ಮೊದಲ ಬಾರಿಗೆ ಕಾಣಿಸಿಕೊಂಡಿದೆ. ಶುಕ್ರವಾರ ಸಂಜೆಯ ಸಮಯ ಮರಳು ದಿಬ್ಬದ ಮೇಲೆ ಮಲಗಿದ್ದ ಮೊಸಳೆಯನ್ನು ಕಂಡಿದ್ದ ಸ್ಥಳೀಯರು ಪೋಟೋ ಕ್ಲಿಕ್ಕಿಸಿದ್ದು, ಶನಿವಾರ ಮಧ್ಯಾಹ್ನದ … Continued

ಅಫ್ಘಾನಿಸ್ತಾನ ಗಡಿಗಳಲ್ಲಿ ತಾಲಿಬಾನಿಗಳಿಂದ ಆತ್ಮಹತ್ಯಾ ಬಾಂಬರ್‌ಗಳ ನಿಯೋಜನೆ:ವರದಿ

ಕಾಬೂಲ್: ತಾಲಿಬಾನ್ ಆತ್ಮಾಹುತಿ ಬಾಂಬರ್‌ಗಳ ವಿಶೇಷ ಬೆಟಾಲಿಯನ್ ಅನ್ನು ರಚಿಸಿದ್ದು, ಅದನ್ನು ಅಫ್ಘಾನಿಸ್ತಾನದ ಗಡಿಗಳಲ್ಲಿ ವಿಶೇಷವಾಗಿ ಬಡಕ್ಷಾನ್ ಪ್ರಾಂತ್ಯದಲ್ಲಿ ನಿಯೋಜಿಸಲಾಗುತ್ತದೆ ಎಂದು ವರದಿಗಳು ಹೇಳಿವೆ. ಪ್ರಾಂತ್ಯದ ಉಪ ಗವರ್ನರ್ ಮುಲ್ಲಾ ನಿಸಾರ್ ಅಹ್ಮದ್ ಅಹ್ಮದಿತಜಾಕಿಸ್ತಾನ್ ಮತ್ತು ಚೀನಾದ ಗಡಿಯಾಗಿರುವ ಈಶಾನ್ಯ ಪ್ರಾಂತ್ಯದ ಬಡಕ್ಷಾನಿನಲ್ಲಿ ಆತ್ಮಾಹುತಿ ಬಾಂಬರ್ ಗಳ ಬೆಟಾಲಿಯನ್ ಸೃಷ್ಟಿಯ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು … Continued

ಮುಂಬೈ ಕರಾವಳಿಯಲ್ಲಿ ಕ್ರೂಸ್‌ನಲ್ಲಿ ರೇವ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ; ಸೂಪರ್‌ ಸ್ಟಾರ್‌ ನಟನ ಪುತ್ರ ಸೇರಿ 10 ಜನರ ಬಂಧನ

ಮುಂಬೈ: ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್ ಸಿಬಿ)ದವರು ಮುಂಬೈ ಕರಾವಳಿಯಲ್ಲಿ ಕ್ರೂಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ವರದಿಗಳ ಪ್ರಕಾರ ಸೂಪರ್‌ ಸ್ಟಾರ್ ನಟನ ಪುತ್ರ ಸೇರಿದಂತೆ 10 ಜನರನ್ನು ಬಂಧಿಸಿದ್ದಾರೆ. ಖಚಿತ ಸುಳಿವು ಪಡೆದ ನಂತರ, ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಇತರ ಎನ್‌ಸಿಬಿ ಅಧಿಕಾರಿಗಳು … Continued

ಉತ್ತರಾಖಂಡದ ಹಿಮಪಾತ: ಕಾಣೆಯಾದ ಐವರಲ್ಲಿ ನಾಲ್ವರು ನೌಕಾಪಡೆ ಪರ್ವತಾರೋಹಿಗಳ ಮೃತದೇಹ ಪತ್ತೆ

ನವದೆಹಲಿ: ಉತ್ತರಾಖಂಡದ ಪರ್ವತದ ಮೇಲೆ ಶುಕ್ರವಾರ ಹಿಮಪಾತದಲ್ಲಿ ಸಿಲುಕಿ ನಾಪತ್ತೆಯಾಗಿದ್ದ ಭಾರತೀಯ ನೌಕಾಪಡೆಯ ಐವರು ಪರ್ವತಾರೋಹಿಗಳಲ್ಲಿ ನಾಲ್ವರ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಲೆಫ್ಟಿನೆಂಟ್ ಸಿಡಿಆರ್ ರಜನಿಕಾಂತ್ ಯಾದವ್, ಲೆಫ್ಟಿನೆಂಟ್ ಸಿಡಿಆರ್ ಯೋಗೀಶ್ ತಿವಾರಿ, ಲೆಫ್ಟಿನೆಂಟ್ ಸಿಡಿಆರ್ ಅನಂತ್ ಕುಕ್ರೆಟಿ ಮತ್ತು ಹರಿ ಓಂ ಅವರ ಶವಗಳನ್ನು ಚಮೋಲಿಯಿಂದ ಶನಿವಾರ ಪತ್ತೆಹಚ್ಚಲಾಗಿದೆ ಎಂದು ಭಾರತೀಯ ನೌಕಾಪಡೆ ಟ್ವೀಟ್ … Continued