ಆರೆಸ್ಸೆಸ್‌ ವಿರುದ್ಧ ಹೇಳಿಕೆ : ಜಾವೇದ್ ಅಖ್ತರ್ ವಿರುದ್ಧ ಎಫ್‍ಐಆರ್

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಬಾಲಿವುಡ್‌ನ ಖ್ಯಾತ ಗೀತೆ ರಚನೆಕಾರ ಜಾವೇದ್ ಅಖ್ತರ್ ಅವರ ವಿರುದ್ಧ ವಕೀಲ ಸಂತೋಷ್ ದುಬೆ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.
ಮುಲುಂಡ್ ಪೊಲೀಸ್ ಠಾಣೆಯಲ್ಲಿ ವಕೀಲ ಸಂತೋಷ್ ದುಬೆ ನೀಡಿದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 500 ( ಮಾನನಷ್ಟಕ್ಕಾಗಿ ಶಿಕ್ಷೆ) ಅಡಿಯಲ್ಲಿ ಎಫ್ ಐಆರ್ ದಾಖಲಾಗಿರುವುದಾಗಿ ಮುಲುಂಡ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ವಾಹಿನಿಯೊಂದರ ಸಂದರ್ಶನವೊಂದರಲ್ಲಿ ಜಾವೇದ್ ಅಖ್ತರ್ ಅವರು ಆರ್‌ಎಸ್‌ಎಸ್‌ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಅವರಿಗೆ ವಕೀಲ ದುಬೆ ನೋಟಿಸ್ ನೀಡಿದ್ದರು. ಸಂದರ್ಶನದಲ್ಲಿ ಜಾವೇದ್ ಅವರು ತಾಲಿಬಾನ್ ಮತ್ತು ಆರೆಸ್ಸೆಸ್‌ ನಡುವೆ ಇರುವ ಸಾಮ್ಯತೆಗಳ ಬಗ್ಗೆಯೂ ಮಾತನಾಡಿದ್ದರು. ಈ ಕುರಿತು ಅವರು ಕ್ಷಮೆಯಾಚಿಸುವಂತೆಯೂ ನೋಟಿಸ್‌ನಲ್ಲಿ ಒತ್ತಾಯಿಸಲಾಗಿತ್ತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ