ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ೫೦ ಸಾವಿರ ಪರಿಹಾರ ನೀಡಿ: ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಮಾರಕ ಕೊರೊನಾಗೆ ಮೃತಪಟ್ಟವರ ಕುಟುಂಬಕ್ಕೆ ೫೦ ಸಾವಿರ ರೂ. ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಮಮಾವಳಿ ಪ್ರಕಾರ ಪರಿಹಾರ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಒಂದು ತಿಂಗಳೊಳಗಾಗಿ ಪರಿಹಾರ ನೀಡುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಚಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೂ ನಿರ್ದಶನ ನೀಡಿದೆ.
ನ್ಯಾಯಮೂರ್ತಿ ಎಂ.ಆರ್. ಶಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದ್ದು, ಮರಣ ಪ್ರಮಾಣ ಪತ್ರದಲ್ಲಿ ಸಾವಿಗೆ ಕಾರಣ ಕೋವಿಡ್- ೧೯ ನಮೂದಿಸಿಲ್ಲ ಎಂಬ ಕಾರಣಕ್ಕಾಗಿ ಯಾವುದೇ ರಾಜ್ಯಗಳು ೫೦ ಸಾವಿರ ರೂ.ಪರಿಹಾರ ಪ್ರಯೋಜನ ನಿರಾಕರಿಸಬಾರದು ಎಂದು ಹೇಳಿದೆ.
ಸಾವಿನ ಕಾರಣ ಸರಿಪಡಿಸಲು ಜಿಲ್ಲಾಧಿಕಾರಿಗಳು ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಾರೆ. ಜಿಲ್ಲಾಮಟ್ಟದ ಸಮಿತಿಯ ವಿವರಗಳನ್ನು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.
ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಹಣವನ್ನು ಪಾವತಿಸಲಾಗುತ್ತದೆ ಮತ್ತು ಸಾವಿಗೆ ಕಾರಣವೆಂದು ಕೋವಿಡ್ ೧೯ ಎಂದು ಪ್ರಮಾಣೀಕರಿಸಬೇಕೆಂದು ಹೇಳಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ೫೦ ಸಾವಿರ ನೀಡುವಂತೆ ಶಿಫಾರಸ್ಸು ಮಾಡುವುದಾಗಿ ಕೇಂದ್ರ ಸರ್ಕಾರ ಕಳೆದ ತಿಂಗಳು ಸುಪ್ರೀಂಕೋರ್ಟ್ ಗೆ ತಿಳಿಸಿತ್ತು.
ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿ ನಿಧನ ಹೊಂದಿದ್ದ ಕುಟುಂಬದವರಿಗೂ ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement