ಲಖಿಂಪುರ ಹಿಂಸಾಚಾರ: ಸ್ಥಳಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ಬಂಧನ: ಕಾಂಗ್ರೆಸ್‌ ಆರೋಪ

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿರುವ ಲಖಿಂಪುರ ಖೇರಿಗೆ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಲಖಿಂಪುರ್ ಖೇರಿಗೆ ಹೋಗುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ಉತ್ತರಪ್ರದೇಶ ಪೊಲೀಸರು ಮ್ಯಾನ್‌ ಹ್ಯಾಂಡ್ಲಿಂಗ್‌ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ, ಸೋಮವಾರ ಬೆಳಗ್ಗೆ 5.30 ರ ಸುಮಾರಿಗೆ ಆಕೆಯನ್ನು ಹರಗಾಂವ್ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿಯ ಕೈಯನ್ನು ಪೊಲೀಸರು ಹಿಡಿದು ಎಳೆದಾಡಿದ್ದಾರೆ ಎಂದು ಆರೋಪಿಸಿದೆ ಹಾಗೂ ಪಕ್ಷ ತನ್ನ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದೆ.
ಪ್ರತಿಭಟನಾ ನಿರತ ರೈತರ ಗುಂಪು ಮತ್ತು ಗೃಹ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರ ಅವರ ಬೆಂಗಾವಲಿನ ನಡುವೆ ಮಾರಕ ಘರ್ಷಣೆಯ ನಂತರ ಸೋಮವಾರ ಟಿಕುನಿಯಾದಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗುವ ನಿರೀಕ್ಷೆಯಲ್ಲಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಲಕ್ನೋ ಬಿಟ್ಟು ಹೋಗುವುದನ್ನು ನಿರ್ಬಂಧಿಸಿ ಗೃಹಬಂಧನದಲ್ಲಿ ಇರಿಸಲಾಗಿತ್ತು.
ಲಖೀಮ್‌ಪುರ್ ಖೇರಿಗೆ ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಸೀತಾಪುರದ ಹರಗಾಂವ್‌ ಬಳಿ ಇಂದು (ಸೋಮವಾರ) ಮುಂಜಾನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಟ್ವೀಟ್ ಟ್ವೀಟ್ ಮಾಡಿದ್ದು, ಅದರಲ್ಲಿ ಪ್ರಿಯಾಂಕಾ ಪೊಲೀಸರೊಂದಿಗೆ ಮಾತನಾಡುತ್ತಿರುವ ವಿಡಿಯೊವಿದೆ. ಇದನ್ನು ಹಂಚಿಕೊಂಡಿರುವ ಅವರು, ‘ಈ ದೇಶದಲ್ಲಿ ಏನಾಗುತ್ತಿದೆ? Z+ ಭದ್ರತೆಯಿರುವ ನಾಯಕಿಯನ್ನು ಯಾವುದೇ ವಾರಂಟ್ ಇಲ್ಲದೇ ಪೊಲೀಸರು ಬಂಧಿಸಿದ್ದಾರೆ’ ಎಂದು ಕ್ಯಾಪ್ಶನ್ ನೀಡಿದ್ದಾರೆ.
ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಗೃಹಬಂಧನದಲ್ಲಿರಿಸಿದ್ದರು. ಪ್ರಿಯಾಂಕಾ ಆ ಆದೇಶವನ್ನು ಧಿಕ್ಕರಿಸಿ ಭಾನುವಾರ ರಾತ್ರಿ ಲಖನೌದಿಂದ ಲಖಿಂಪುರ್ ಖೇರಿಗೆ ತೆರಳಿದರು. ಉತ್ತರ ಪ್ರದೇಶ ಪೊಲೀಸರು ಇಂದು (ಸೋಮವಾರ) ಬೆಳಗಿನ ಜಾವ 5.30 ರ ಸುಮಾರಿಗೆ ಹರಗಾಂವ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಪ್ರಿಯಾಂಕಾರನ್ನು ಬಂಧಿಸಿದ್ದಾರೆ. ಅವರನ್ನು ಸೀತಾಪುರ ಜಿಲ್ಲೆಯ ಅತಿಥಿ ಗೃಹಕ್ಕೆ ಕರೆದೊಯ್ಯಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಲಖಿಂಪುರ್ ಖೇರಿಗೆ ಹೋಗುವ ದಾರಿಯಲ್ಲಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರದ ಘಟನೆಯ ಕುರಿತು ಮಾತನಾಡಿ, ಈ ದೇಶದಲ್ಲಿ ರೈತರನ್ನು ತುಳಿಯುತ್ತಿರುವ ರೀತಿಯನ್ನು ಹೇಳಲು ನನ್ನ ಬಳಿ ಪದಗಳಿಲ್ಲ. ತಿಂಗಳುಗಳಿಂದ, ರೈತರ ಮಾತನ್ನು ಸರ್ಕಾರವು ಕೇಳಲು ಸಿದ್ಧವಾಗಿಲ್ಲ. ಇಂದಿನ ಘಟನೆಯು ಈ ಸರ್ಕಾರವು ರೈತರನ್ನು ತುಳಿಯುವ ರಾಜಕೀಯ ಮಾಡುತ್ತಿದೆ ಎಂಬುದನ್ನು ತೋರಿಸುತ್ತದೆ. ಈ ದೇಶವು ರೈತರ ದೇಶವಾಗಿದೆ ಎಂದು ಅವರು ಹೇಳಿದರು.
ತನ್ನನ್ನು ಗೃಹಬಂಧನದಲ್ಲಿಡಲು ಉತ್ತರ ಪ್ರದೇಶದ ಪೊಲೀಸರ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, “ನಾನು ಮನೆಯಿಂದ ಹೊರಹೋಗುವ ಮೂಲಕ ಯಾವುದೇ ಅಪರಾಧ ಮಾಡುತ್ತಿಲ್ಲ. ನಾನು ಕೇವಲ ಪೀಡಿತ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಅವರ ದುಃಖವನ್ನು ಹಂಚಿಕೊಳ್ಳಲು ಬಯಸುತ್ತೇನೆ. ನಾನು ಏನು ತಪ್ಪು ಮಾಡುತ್ತಿದ್ದೇನೆ? ಮತ್ತು ನಾನು ಏನಾದರೂ ತಪ್ಪು ಮಾಡಿದ್ದರೆ, ನೀವು [ಉತ್ತರ ಪ್ರದೇಶ ಪೋಲಿಸ್] ಆದೇಶ, ವಾರಂಟ್ ಹೊಂದಿರಬೇಕು. ನೀವು [ಉತ್ತರ ಪ್ರದೇಶ ಪೋಲಿಸ್] ನನ್ನ ಕಾರನ್ನು ನಿಲ್ಲಿಸುತ್ತಿದ್ದೀರಿ, ಆದರೆ ಯಾವ ಕಾರಣಕ್ಕಾಗಿ ನಿಲ್ಲಿಸುತ್ತಿದ್ದೀರಿ ಎಂದು ಅವರು ಈ ಸಂದರ್ಭದಲ್ಲಿ ಅವರು ಪೊಲೀಸರನ್ನು ಪ್ರಶ್ನಿಸಿದ್ದಾರೆ.
ಅಖಿಲೇಶ್ ಯಾದವ್ ಅವರಿಗೆ ಗೃಹಬಂಧನ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಗೃಹಬಂಧನದಲ್ಲಿರಸಲಾಗಿದೆ. ಅವರನ್ನು ಲಕ್ನೋದಲ್ಲಿರುವ ಅವರ ಮನೆಯಲ್ಲಿ ಬಂಧನದಲ್ಲಿರಸಲಾಗಿದೆ.

ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

ಲಖಿಂಪುರ- ಖೇರಿಯಲ್ಲಿ ಏನಾಗಿತ್ತು?
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಕೇಶವ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿಗಾಗಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಇಬ್ಬರು ರೈತರ ಮೇಲೆ ಸಚಿವರ ಬೆಂಗಾವಲು ವಾಹನ ಹರಿದು ಸಾವಿಗೀಡಾಗಿದ್ದಾರೆ ಎಂದು ರೈತರು ಆರೋಪಿಸಿದ್ದರು. ಒಟ್ಟು 8 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement