ಕೋವಿಡ್‌ನಿಂದ ಮೃತಪಟ್ಟ ಅನಾಥರಿಗೆ ಮುಕ್ತಿ ದೊರಕಿಸಿದ ಸಚಿವ ಅಶೋಕ್‌

ಮಂಡ್ಯ: ಕೋವಿಡ್‌ ಮಹಾಮಾರಿಯಿಂದ ಹಲವು ಮಂದಿ ಹಲವು ಮಂದಿ ಅನಾಥರು ಮೃತಪಟ್ಟಿದ್ದಾರೆ. ಕೋವಿಡ್‌ ನಿಂದ ಮೃತಪಟ್ಟ ಅನಾಥ ಶವಗಳ ಅಂತ್ಯಕ್ರಿಯೆಯನ್ನು ಕಂದಾಯ ಸಚಿವ ಆರ್‌.ಅಶೋಕ ನೆರವೇರಿಸಿದ್ದರು. ಈ ಹಿನ್ನೆಲೆಯಲ್ಲಿಂದು ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗೋಸಾಯಿ ಘಾಟ್‌ನಲ್ಲಿ ಕೊರೊನಾ ವೈರಸ್‌ನಿಂದ ಮೃತರಾದವರ ಆತ್ಮಕ್ಕೆ ಶಾಂತಿ ದೊರಕಿಸಲು ಪಿತೃಪಕ್ಷದ ಸಂದರ್ಭದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. ಸಚಿವ ಅಶೋಕ ನೇತೃತ್ವದಲ್ಲಿ ಮಂಡ್ಯ ಜಿಲ್ಲಾಡಳಿತ ಹಾಗೂ ಡಾ.ವಿ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ರೂಪರೇಷ ಸಿದ್ಧಪಡಿಸಿಕೊಂಡು ಧಾರ್ಮಿಕ ಕಾರ್ಯ ನಡೆಸಲಾಗಿದೆ. ಸಾಮೂಹಿಕವಾಗಿ ಪ್ರೇತ ಸಂಸ್ಕಾರ, ನಾರಾಯಣ ಬಲಿ, ಎಡೆ ಪೂಜೆಯ ನಂತರದಲ್ಲಿ ತಿಲತರ್ಪಣದೊಂದಿಗೆ ಕಾವೇರಿ ನದಿಯಲ್ಲಿ ಎಲ್ಲಾ ಕಾರ್ಯಗಳನ್ನು ನೆರವೇರಿಸಲಾಗಿದೆ.
ಸಚಿವ ಆರ್.‌ ಅಶೋಕ್‌ ಅವರು ಈ ಹಿಂದೆಯೂ ಕೊರೊನಾ ವೈರಸ್‌ ಸೋಂಕಿನಿಂದ ಮೃತಪಟ್ಟ ವಾರಾಸುದಾರರಿಲ್ಲದ ಸುಮಾರು ಸಾವಿರಕ್ಕೂ ಅಧಿಕ ಅಸ್ತಿಯನ್ನು ವಿಸರ್ಜನೆ ಯನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿಂದು ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ, ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜಾ, ಉಪ ವಿಭಾಗಾಧಿಕಾರಿಗಳಾದ ಶಿವಾನಂದಮೂರ್ತಿ, ವಾರ್ತಾಧಿಕಾರಿ ಟಿ.ಕೆ.ಹರೀಶ್, ಶ್ರೀರಂಗಪಟ್ಟಣ ತಹಸಿಲ್ದಾರ್ ಶ್ವೇತಾ ಮುಂತಾದವರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ನಂತರದಲ್ಲಿ ಮಾತನಾಡಿದ ಸಚಿವ ಆರ್.‌ ಅಶೋಕ್‌ ಅವರು, ಕೋವಿಡ್ ಸಾಂಕ್ರಾಮಿಕದಿಂದ ಮೃತರಾದವರಿಗೆ ಗೌರವಯುತವಾಗಿ ಶವಸಂಸ್ಕಾರ ಮಾಡಲು ಸರ್ಕಾರ ಮುಂದಾಗಿದೆ. ಯಾರು ಅನಾಥರಲ್ಲ, ಬದುಕಿದ್ದಾಗ ಎಲ್ಲರೂ ಸಹ ಸಮಾಜಕ್ಕಾಗಿ ಕೆಲಸ ಮಾಡಿದ್ದಾರೆ. ನಮ್ಮದು ಮಾನವೀಯತೆ ಮೆರೆದಂತಹ ರಾಜ್ಯವಾಗಿದೆ. ಆದ್ದರಿಂದ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಸಾಮೂಹಿಕ ಅಂತಿಮ ವಿಧಿವಿಧಾನ ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement