ಡ್ರಗ್ಸ್‌ ಪ್ರಕರಣ: ಆರ್ಯನ್ ಖಾನ್‌ ಸೇರಿ ಮೂವರು ಮತ್ತೆ ಮೂರು ದಿನ ಎನ್ ಸಿಬಿ ವಶಕ್ಕೆ

ಮುಂಬೈ: ಮಾದಕ ವಸ್ತು ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ ಮೂರು ಮಂದಿಗೆ ಮುಂಬೈನ ಕಿಲ್ಲಾ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಅಲ್ಲದೆ, ಅಕ್ಟೋಬರ್‌ 7ರ ತನಕ ಎನ್‌ಸಿಬಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪುತ್ರನಿಗೆ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ಗೌರಿ ದಂಪತಿಗೆ ನಿರಾಸೆಯಾಗಿದೆ. ಎನ್ಸಿಬಿ ಅಧಿಕಾರಿಗಳ ವಶಕ್ಕೆ ನೀಡಿದ್ದ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್, ಮುನ್ನೂನ್ ದಮೇಚಾ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ನ್ಯಾಯಾಲಯ ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ರಾಷ್ಟ್ರೀಯ ಮಾದಕ ವಸ್ತು ಅಧಿಕಾರಿಗಳ ಕೋರಿಕೆಯ ಮೇಲೆ ಮತ್ತಷ್ಟು ವಿಚಾರಣೆಗೆ ಅವರ ವಶಕ್ಕೆ ನೀಡಿದೆ. ಮಾದಕವಸ್ತು ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮೂವರನ್ನು ಹೆಚ್ಚಿನ ವಿಚಾರಣೆ ನಡೆಸಬೇಕಾಗಿದೆ ಹೀಗಾಗಿ ಮತ್ತೆ ಇನ್ನಷ್ಟು ದಿನಗಳಕಾಲ ವಶಕ್ಕೆ ನೀಡುವಂತೆ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಎನ್ಸಿಬಿ ಅಧಿಕಾರಿಗಳ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಮೂರು ದಿನಗಳ ಕಾಲ ವಿಚಾರಣೆಗೆ ಅವಕಾಶ ಮಾಡಿಕೊಟ್ಟಿದೆ.
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪರ ವಾದ ಮಾಡಿದ ವಕೀಲರು, ಆರ್ಯನ್ ಖಾನ್ ಬಳಿ ಯಾವುದೇ ಮಾದಕವಸ್ತು ಸಿಕ್ಕಿಲ್ಲ.ಈ ಕಾರ್ಯಕ್ರಮಕ್ಕೆ ಅವರು ವಿಶೇಷ ಅತಿಥಿಯಾಗಿ ಹೋಗಿದ್ದರು ಅವರಿಗೆ ಜಾಮೀನು ನೀಡಬಹುದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಎನ್ಸಿಬಿ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದರು.
ಅಂತಿಮವಾಗಿ ನ್ಯಾಯಾಲಯ ಮೂವರು ಬಂಧಿತರಿಗೆ ಮತ್ತೆ ಮೂರು ದಿನಗಳ ಕಾಲ ಎಂಸಿಬಿ ಅಧಿಕಾರಿಗಳ ವಶಕ್ಕೆ ನೀಡಿದೆ.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement