ಬಿಜೆಪಿ ಶಾಸಕರು ಸಿಂಹಗಳಿದ್ದಂತೆ, ಮಾರಾಟದ ವಸ್ತುಗಳಲ್ಲ : ಸಚಿವ ಈಶ್ವರಪ್ಪ

ಬಿಜೆಪಿ ಶಾಸಕರು ಸಿಂಹಗಳಿದ್ದಂತೆ, ಮಾರಾಟದ ವಸ್ತುಗಳಲ್ಲ : ಸಚಿವ ಈಶ್ವರಪ್ಪ

ಕಲಬುರಗಿ :ಬಿಜೆಪಿ ಶಾಸಕರು ಸಿಂಹಗಳಿದ್ದಂತೆ, ನಮ್ಮ ಪಕ್ಷದ ಶಾಸಕರು ಮಾರಾಟದ ವಸ್ತುಗಳಲ್ಲ, ಹೀಗಾಗಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಮಾತೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಅವರು ನಗರದ ಐವನ್ ಎ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ 40 ಜನ ಅಲ್ಲ, 4 ಜನ ಶಾಸಕರನ್ನು ಸೆಳೆಯಲಿ ನೋಡೋಣ ಎಂದು ಸವಾಲು ಹಾಕಿದರು.
ಸಾಯುವ ಪಕ್ಷಕ್ಕೆ ಯಾರಾದರೂ ಹೋಗುತ್ತಾರೆಯೇ ಎಂದು ಪ್ರಶ್ನಿಸಿದರು.
ಪಂಜಾಬಿಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಹೋದರೆ, ಇಡೀ ದೇಶದಲ್ಲೇ ಕಾಂಗ್ರೆಸ್ ಪಕ್ಷ ತುಂಡು ತುಂಡಾಗುತ್ತದೆ. ಕಾಂಗ್ರೆಸ್ ಪಕ್ಷ ಮೊದಲು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಈ ಹಿಂದೆ ಮಾಡಿದ ಕೆಲಸಗಳ ಬಗ್ಗೆ ಪಟ್ಟಿ ಕೊಡಲಿ, ನಂತರ ನಾವು ಕೊಡುತ್ತೇವೆ. ಅನೇಕ ರಾಷ್ಟ್ರಗಳ ಮುಸ್ಲಿಮರು ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ

ಎರಡು ಉಪ ಚುನಾವಣೆ ಬಿಜೆಪಿ ಗೆಲವು…
ಸಿಂದಗಿ-ಹಾನಗಲ್ ಎರಡು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲವು ಶತಸಿದ್ಧ. ಕಾಂಗ್ರೆಸ್ ಪಕ್ಷದಲ್ಲಿ ಕಾಯ೯ಕತ೯ರೆ ಇಲ್ಲ. ಬೇರೆ ಮನೆಯವರನ್ನು ಕರೆದುಕೊಂಡು ಟಿಕೆಟ್ ನೀಡುತ್ತಿದ್ದಾರೆ ಎಂದರು.
ಚುನಾವಣೆ ಬಂದರೆ ಕಾಂಗ್ರೆಸ್ ಪಕ್ಷ ನಡುಗಿ ಹೋಗುತ್ತದೆ. ಬಹುತೇಕ ಕಡೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಡಿಪಾಜಿಟ್ ಕಳೆದುಕೊಳ್ಳಲಿದ್ದಾರೆ ಎಂದರು.
ಈಶ್ವರಪ್ಪ ತಂಟೆಗೆ ನಾನು ಹೋಗುವುದಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಎನೂ ಮಾಡುತ್ತೇನೆ ಎಂಬುವುದು ಅವರಿಗೆ ಗೊತ್ತಿದೆ. ಅದಕ್ಕಾಗಿ ಅವರು ನನ್ನ ತಂಟೆಗೆ ಬರುವುದಿಲ್ಲ ಎಂದರು.
ಹಿಂದುತ್ವವು ನಮ್ಮ ಅಜೆಂಡಾ ಆಗಿದ್ದು, ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದರು. ಇನ್ನಾದರೂ ಕಾಂಗ್ರೆಸ್ ಪಕ್ಷ ಎಕ ವಚನದಲ್ಲಿ ಮಾತನಾಡುವುದನ್ನು ನಿಲ್ಲಿಸಲಿ ಎಂದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement