ಸರ್ಕಾರದ ಅನುಮತಿ ಇಲ್ಲದೆ ಎಸ್‌ಸಿ-ಎಸ್‌ಟಿ ಭೂಮಿ ಪರಿವರ್ತನೆ ಮಾಡುವಂತಿಲ್ಲ

ಬೆಂಗಳೂರು: ಸರ್ಕಾರದಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಮೀನನ್ನು ಭೂ ಪರಿವರ್ತನೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸೂಚಿಸಿದೆ.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ಕೆಲವು ಭೂಮಿಗಳ ಪರಭಾಷೆ ನಿಷೇಧ) ಅನಿಯಮ 1978ರ ಪ್ರಕಾರ ಸರ್ಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆದ ನಂತರವಷ್ಟೇ ಭೂ ಪರಿವರ್ತನೆ ಮಾಡಬೇಕು ಎಂದು ಸೂಚಿಸಲಾಗಿದೆ.
ಒಂದು ವೇಳೆ ಅನುಮತಿ ಪಡೆಯದೇ ಭೂ ಪರಿವರ್ತನೆ ಮಾಡಿದ್ದೇ ಆದರೆ ಅದಕ್ಕೆ ಸಂಬಂಧಿಸಿದ ಜಿಲ್ಲಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಈ ಸಂಬಂಧ ಪ್ರಾದೇಶಿಕ ಆಯುಕ್ತರು, ಎಲ್ಲ ಜಿಲ್ಲಾಧಿಕಾರಿಗಳು, ಎಲ್ಲ ಉಪವಿಭಾಗಾಕಾರಿಗಳು, ಎಲ್ಲ ತಹಶೀಲ್ದಾರರಿಗೆ ಸುತ್ತೋಲೆ ಮೂಲಕ ಕಂದಾಯ ಇಲಾಖೆ ಸೂಚಿಸಿದೆ.

0 / 5. 0

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement