ಒಂದೇ ದಿನ 40 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಹುಚ್ಚು ನಾಯಿ

posted in: ರಾಜ್ಯ | 0

ಮಂಡ್ಯ : ಇಲ್ಲಿ ಹುಚ್ಚು ನಾಯಿ ಇನ್ನಿಲ್ಲದಂತೆ ಅವಾಂತರ ಸೃಷ್ಟಿಸಿದೆ. ಒಂದೇ ದಿನ ಬರೋಬ್ಬರಿ 40ಕ್ಕೂ ಅಧಿಕ ಮಂದಿಗೆ ಹುಚ್ಚು ನಾಯಿ ಕಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದಿದೆ.
ಕೆ.ಆರ್. ಪೇಟೆ ತಾಲೂಕಿನ ಸುತ್ತಮುತ್ತಲ ಗ್ರಾಮದಲ್ಲಿ ಹುಚ್ಚು ನಾಯಿಯ ಹಾವಳಿ ಹೆಚ್ಚಾಗಿದ್ದು, ಸುಮಾರು 40ಕ್ಕೂ ಹೆಚ್ಚು ಜನರಿಗೆ ಕಚ್ಚಿದೆ ಎಂದು ತಿಳಿದುಬಂದಿದೆ. ಸದ್ಯ ಗಾಯಾಳುಗಳನ್ನು ಕೆ.ಆರ್. ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆ.ಆರ್. ಪೇಟೆ ಪಟ್ಟಣ, ಮಾಕವಳ್ಳಿ, ಕುಂದನಹಳ್ಳಿ, ಹೆಗ್ಗಡ, ಪುರಗೇಟ್ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ 40 ಕ್ಕೂ ಹೆಚ್ಚು ಜನರಿಗೆ ಹುಚ್ಚು ನಾಯಿ ಕಚ್ಚಿದ್ದು, ಗಾಯಾಳುಗಳನ್ನು ಕೆ.ಆರ್. ಪೇಟೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇನ್ನು ಹಲವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ