ದತ್ತ ಪೀಠ: ಹೈಕೋರ್ಟ್ ತೀರ್ಪು ಜಾರಿಗೆ ಸಂಪುಟ ಉಪ ಸಮಿತಿ ರಚನೆ

posted in: ರಾಜ್ಯ | 0

ಬೆಂಗಳೂರು : ದತ್ತಪೀಠಕ್ಕೆ ಅರ್ಚಕರ ನೇಮಕ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ .
ಚಿಕ್ಕಮಗಳೂರು ಜಿಲ್ಲೆಯ ದತ್ತ ಪೀಠ ಅಥವಾ ಬಾಬಾಬುಡನಗಿರಿ ಗುಹೆಯಲ್ಲಿ ಪೂಜಾ ವಿಧಿವಿಧಾನಗಳನ್ನು ನಡೆಸಲು ಮುಜಾವರರನ್ನು ನೇಮಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು.
ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಅಭಿವೃದ್ಧಿ ಸಮಿತಿಯು ಈ ಹಿಂದೆ ಮೇ 19, 2018 ರಂದು ಹೊರಡಿಸಿದ ರಾಜ್ಯ ಸರ್ಕಾರದ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪಿ. ಎಸ್. ದಿನೇಶ್ ಕುಮಾರ್ ಅವರ ಏಕ ಸದಸ್ಯ ಪೀಠವು ಅರ್ಜಿದಾರರ ವಾದಗಳನ್ನು ಒಪ್ಪಿತು ಮತ್ತು ಮೇ 19 ರ ಆದೇಶವನ್ನು ರದ್ದುಗೊಳಿಸಿತು. ಇದು ಉನ್ನತ ಮಟ್ಟದ ಸಮಿತಿಯ ವರದಿ ಪರಿಗಣಿಸದೆ, ಸಮಸ್ಯೆಯನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದ ಪೂಜೆಗೆ ಹಿಂದಿನ ಸರ್ಕಾರ ನೇಮಿಸಿದ್ದ ಮುಜಾವರ್​ಗಳ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್​ ಪೂಜಾ ವಿಧಾನದ ಬಗ್ಗೆ ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಸೆ.28ರಂದು ಸೂಚಿಸಿತ್ತು. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಸರ್ಕಾರ ತೆಗೆದುಕೊಂಡಿದ್ದ ನೇಮಕಾತಿ ನಿರ್ಧಾರವನ್ನು ರದ್ದುಪಡಿಸಿದ್ದ ಹೈಕೋರ್ಟ್​ ಪೂಜಾವಿಧಾನದ ಕುರಿತು ಹೊಸದಾಗಿ ತೀರ್ಮಾನಿಸಲು ಆದೇಶ ನೀಡಿತ್ತು. ಈ ಹಿನ್ನೆಲೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ