ಲಖಿಂಪುರ್ ಖೇರಿ ಪ್ರಕರಣ; ಸುಪ್ರೀಕೋರ್ಟ್‌ ಸುರ್ದಿಯಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ವಕೀಲರು

ನವದೆಹಲಿ: ಉತ್ತರ ಪ್ರದೇಶದ ಇಬ್ಬರು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರಿಗೆ ಪತ್ರ ಬರೆದಿದ್ದು, ಲಖಿಂಪುರ್ ಖೇರಿಯಲ್ಲಿ ( Lakhimpur Kheri) ನಡೆದ ಘಟನೆಗಳ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಉತ್ತರ ಪ್ರದೇಶ ಸರ್ಕಾರವು ನಿವೃತ್ತ ನ್ಯಾಯಾಧೀಶರಿಂದ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸುವುದಾಗಿ ಹೇಳಿದೆ. “ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಚಿವರು ಮತ್ತು ಅವರ ಸಂಬಂಧಿಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು” ಎಂದು ವಕೀಲರಾದ ಶಿವಕುಮಾರ ತ್ರಿಪಾಠಿ ಮತ್ತು ಸಿ.ಎಸ್. ಪಾಂಡ ಮುಖ್ಯ ನ್ಯಾಯಮೂರ್ತಿ ರಮಣ ಅವರಿಗೆ ಪತ್ರ ಬರೆದಿದ್ದಾರೆ.
ಎಫ್ಐಆರ್ ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕೆಂದು ವಕೀಲರು ಕೋರಿದ್ದಾರೆ. “ಘಟನೆ ಬಗ್ಗೆ ಎಫ್‌ಐಆರ್ ದಾಖಲಿಸಬೇಕು ಮತ್ತು ಆರೋಪಿ ಸಚಿವರ ಮಗನಿಗೆ ಶಿಕ್ಷೆಯಾಗಬೇಕು” ಎಂದು ಅವರು ಬರೆದಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಕೇಂದ್ರದ ಕಿರಿಯ ಗೃಹ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಮೇಲೆ ಕೊಲೆ ಮತ್ತು ನಿರ್ಲಕ್ಷ್ಯದ ಆರೋಪ ಹೊರಿಸಿ ಎಫ್‌ಐಆರ್‌ನಲ್ಲಿ ಅವರ ಹೆಸರನ್ನು ಸಹ ದಾಖಲಿಸಲಾಗಿದೆ.
ಭಾನುವಾರ ಕೇಂದ್ರ ಸಚಿವರ ಭೇಟಿಯನ್ನು ತಡೆಯಲು ಪ್ರಯತ್ನಿಸುತ್ತಿದ್ದ ಪ್ರತಿಭಟನಾಕಾರರ ಗುಂಪಿನ ಮೇಲೆ ಹಾಯ್ದ ಎಸ್​​ಯುವಿಯಲ್ಲಿ ಆಶಿಶ್ ಮಿಶ್ರಾ ಇದ್ದರು ಎಂದು ರೈತರು ಆರೋಪಿಸಿದ್ದಾರೆ. ಈ ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟಿದ್ದಾರೆ. ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಅವರಲ್ಲಿ ಒಬ್ಬರಿಗೆ ಗುಂಡು ಹಾರಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಎರಡನೇ ಮರಣೋತ್ತರ ಪರೀಕ್ಷೆ ದೆಹಲಿಯ ಆಸ್ಪತ್ರೆಯಲ್ಲಿ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಮೊದಲ ಮರಣೋತ್ತರ ಪರೀಕ್ಷೆಯು ಎಲ್ಲಾ ಎಂಟು ಸಾವುಗಳಿಗೆ ಗಾಯಗಳು, ಆಘಾತ ಮತ್ತು ಮಿದುಳಿನ ರಕ್ತಸ್ರಾವದಿಂದ ಸಂಭವಿಸಿದೆ ಎಂದು ಹೇಳಿದೆ.
ರೈತರ ಪ್ರತಿಭಟನೆ ಶಾಂತಿಯುತವಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ ಎಂದು ವಕೀಲರ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, “ಪ್ರದರ್ಶನಕಾರರ ಮೇಲೆ ಇಂತಹ ಕ್ರಮವು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರದಲ್ಲಿ ಹೇಳಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ