ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಮೂವರು ನಾಗರಿಕರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ತೋರಿದ್ದು ಮೂವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ. ಮೂರು ಗಂಟೆಯ ಅವಧಿಯಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ.
ಶ್ರೀನಗರದಲ್ಲಿ ಉಗ್ರರ ಗುಂಡು ಹಾರಿಸಿ ಹಿಂದೂ ವ್ಯಾಪಾರಿಯನ್ನು ಹತ್ಯೆ ಮಾಡಿದ್ದಾರೆ. ಇಕ್ಬಾಲ್ ಪಾರ್ಕ್ ನಲ್ಲಿ ವ್ಯಾಪಾರಿ ಮಖನ್ ಲಾಲ್ ಬಿಂದ್ರೂನನ್ನು ಹತ್ಯೆ ಮಾಡಲಾಗಿದೆ. ಬಳಿಕ ಶ್ರೀನಗರದ ಹೊರವಲಯದಲ್ಲಿನ ಮದೀನ್ ಸಾಹೀಬ್ ನಲ್ಲಿ ಬೀದಿಬದಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದಾರೆ. ನಂತರ ಬಂಡೀಪೋರಾದಲ್ಲಿ ಕೂಡ ನಾಗರಿಕನನ್ನು ಹತ್ಯೆ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಮೂರು ಕಡೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಇಡೀ ಪ್ರದೇಶವನ್ನು ಸೇನೆ ಮತ್ತು ಪೊಲೀಸ್ ಸಿಬ್ಬಂದಿ ಸುತ್ತುವರೆದಿದ್ದು, ಉಗ್ರರ ಸದೆಬಡಿಯಲು ಕಾರ್ಯಾಚರಣೆ ಮುಂದುವರೆದಿದೆ.

0 / 5. 0

ಪ್ರಮುಖ ಸುದ್ದಿ :-   ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

ನಿಮ್ಮ ಕಾಮೆಂಟ್ ಬರೆಯಿರಿ

advertisement