ಸಿಂಧಗಿ, ಹಾನಗಲ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಶೋಕ ಮನಗೂಳಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರನ್ನು ಅಭ್ಯರ್ಥಿಗಳಾಗಿ ಕಾಂಗ್ರೆಸ್‌ ಘೋಷಣೆ ಮಾಡಿದೆ. ಅಕ್ಟೋಬರ್ 30 ರಂದು ಈ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಅಶೋಕ ಮನಗೂಳಿ ಅವರಿಗೆ ಟಿಕೆಟ್ ಖಾತರಿಯಾಗಿತ್ತು. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಮನೋಹರ್ ತಹಸಿಲ್ದಾರ್ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆಸಿದ್ದರು. ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿ ಕೇಳಿಬಂದಿತ್ತು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಕಾಂಗ್ರೆಸ್​ನ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿದ್ದರು. 2018ರ ಚುನಾವಣೆ ಸಂದರ್ಭದಲ್ಲಿ ಹಾಲಿ ಶಾಸಕರಾಗಿದ್ದರೂ ಕಾಂಗ್ರೆಸ್ ಟಿಕೆಟ್ ವಂಚಿತರಾಗಿದ್ದ ಮಾಜಿ ಸಚಿವ ಮನೋಹರ ತಹಶೀಲ್ದಾರ ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇವರ ಜೊತೆಗೆ ಪ್ರಕಾಶಗೌಡ ಪಾಟೀಲ ಸೇರಿದಂತೆ ಮತ್ತೂ ಕೆಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗಿತ್ತು.
ಸಿಂಧಗಿ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ ಹಾಗೂ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ನಿಯಾಜ್ ಶೇಕ್ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಇನ್ನೂ ಅಭ್ಯರ್ಥಿಗಳ ಹೆಸರು ಪ್ರಕಟಗೊಳಿಸಿಲ್ಲ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement