ಬೆಂಗಳೂರು : ದತ್ತಪೀಠಕ್ಕೆ ಅರ್ಚಕರ ನೇಮಕ ಕುರಿತು ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ .
ಚಿಕ್ಕಮಗಳೂರು ಜಿಲ್ಲೆಯ ದತ್ತ ಪೀಠ ಅಥವಾ ಬಾಬಾಬುಡನಗಿರಿ ಗುಹೆಯಲ್ಲಿ ಪೂಜಾ ವಿಧಿವಿಧಾನಗಳನ್ನು ನಡೆಸಲು ಮುಜಾವರರನ್ನು ನೇಮಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು.
ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಅಭಿವೃದ್ಧಿ ಸಮಿತಿಯು ಈ ಹಿಂದೆ ಮೇ 19, 2018 ರಂದು ಹೊರಡಿಸಿದ ರಾಜ್ಯ ಸರ್ಕಾರದ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಪಿ. ಎಸ್. ದಿನೇಶ್ ಕುಮಾರ್ ಅವರ ಏಕ ಸದಸ್ಯ ಪೀಠವು ಅರ್ಜಿದಾರರ ವಾದಗಳನ್ನು ಒಪ್ಪಿತು ಮತ್ತು ಮೇ 19 ರ ಆದೇಶವನ್ನು ರದ್ದುಗೊಳಿಸಿತು. ಇದು ಉನ್ನತ ಮಟ್ಟದ ಸಮಿತಿಯ ವರದಿ ಪರಿಗಣಿಸದೆ, ಸಮಸ್ಯೆಯನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠದ ಪೂಜೆಗೆ ಹಿಂದಿನ ಸರ್ಕಾರ ನೇಮಿಸಿದ್ದ ಮುಜಾವರ್ಗಳ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್ ಪೂಜಾ ವಿಧಾನದ ಬಗ್ಗೆ ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಸೆ.28ರಂದು ಸೂಚಿಸಿತ್ತು. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಸರ್ಕಾರ ತೆಗೆದುಕೊಂಡಿದ್ದ ನೇಮಕಾತಿ ನಿರ್ಧಾರವನ್ನು ರದ್ದುಪಡಿಸಿದ್ದ ಹೈಕೋರ್ಟ್ ಪೂಜಾವಿಧಾನದ ಕುರಿತು ಹೊಸದಾಗಿ ತೀರ್ಮಾನಿಸಲು ಆದೇಶ ನೀಡಿತ್ತು. ಈ ಹಿನ್ನೆಲೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ