ಬೆಂಗಳೂರಿನಲ್ಲಿ ತಾಯಿ, ಎರಡೂವರೆ ವರ್ಷದ ಮಗುವಿನ ಹತ್ಯೆ

posted in: ರಾಜ್ಯ | 0

ಬೆಂಗಳೂರು: ನಗರದ ಬೇಗೂರು ಠಾಣಾ ವ್ಯಾಪ್ತಿಯ ಚೌಡೇಶ್ವರಿ ಲೇಔಟ್​ನಲ್ಲಿ ತಾಯಿ ಮತ್ತು ಎರಡೂವರೆ ವರ್ಷದ ಮಗುವನ್ನು ಹತ್ಯೆ ಮಾಡಲಾಗಿದೆ.
ಇಬ್ಬರನ್ನೂ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ತಾಯಿ ಮತ್ತು ಮಗುವಿನ ಮೃತದೇಹಗಳು ಬುಧವಾರ ಪತ್ತೆಯಾಗಿವೆ. ಸಂಬಂಧಿಕರು ಮನೆಗೆ ಬಂದಾಗ ಕೊಲೆಯ ಘಟನೆ ಬೆಳಕಿಗೆ ಬಂದಿದೆ.
ಗಂಡ ಮುಂಜಾನೆ ಕೆಲಸಕ್ಕೆ ಹೋದ ಬಳಿಕ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಯಿಯ ವಯಸ್ಸು 28 ವರ್ಷ ಮತ್ತು ಮಗುವಿನ ವಯಸ್ಸು 2 ವರ್ಷ ಎಂದು ಅಂದಾಜಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ