ಲಖೀಂಪುರ್ ಹಿಂಸಾಚಾರ :ಇಂದು ಸುಪ್ರೀಂಕೋರ್ಟಿನಲ್ಲಿ ವಿಚಾರಣೆ

ನವದೆಹಲಿ: ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶದ ಲಖೀಂಪುರ್ – ಖೇರ್ ಹಿಂಸಾಚಾರ ಘಟನೆ ಸಂಬಂಧ ಸುಪ್ರೀಂಕೋರ್ಟ್ ಬುಧವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.
ಲಖೀಂಪುರ್ ಖೇರ್ ನಲ್ಲಿ ಭಾನುವಾರ ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದರು. ಕೇಂದ್ರ ಸಚಿವರ ಪುತ್ರನೊಬ್ಬ ಇದರಲ್ಲಿ ತೊಡಗಿಸಿಕೊಂಡಿರುವುದಾಗಿ ಆರೋಪಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿವೆ.
ಲಖೀಂಪುರ್- ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐನಿಂದ ತನಿಖೆ ನಡೆಸಬೇಕೆಂದು ಕೋರಿ ಉತ್ತರ ಪ್ರದೇಶದ ವಕೀಲರೊಬ್ಬರು ಮುಖ್ಯ ನ್ಯಾಯಾಧೀಶರ ಬಳಿ ಮಂಗಳವಾರ ಕೋರಿದ್ದರು.

0 / 5. 0

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement