ಕರ್ನಾಟಕದಲ್ಲಿ ಇನ್ನೂ ಎರಡ್ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡರಿಂದ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಹೆಚ್ಚಿದೆ. ಸ್ವಲ್ಪ ಸಮಯ ಮಳೆ ಕಡಿಮೆಯಾಗಿ, ಸ್ವಲ್ಪ ಸಮಯ ಮಳೆ ಜಾಸ್ತಿ ಆಗಬಹುದು. ಬೆಂಗಳೂರಿನಲ್ಲಿ ಇಡೀ ರಾತ್ರಿ ತುಂತುರು ಮಳೆ ಆಗಿದೆ. ಇದೇ ರೀತಿ ಇನ್ನು ಎರಡು ದಿನ ಮಳೆ ಆಗುವ ಸಂಭವ ಇದೆ ಎಂದು ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಬುಧವಾರ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಷಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಷಿಯಸ್ ದಾಖಲಾಗಲಿದೆ. ಮಳೆಯಿಂದ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಮರಗಳು ಬಿದ್ದಿದ್ದು, ಇನ್ನು ಕೆಲವೆಡೆ ಮನೆ, ಅಪಾರ್ಟ್​ಮೆಂಟ್​ಗಳಿಗೆ ನೀರು ನುಗ್ಗಿದೆ. ಇಂದು ಸಂಜೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಇಂದು (ಬುಧವಾರ)ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗಿನಲ್ಲಿ ಮಳೆ ಹೆಚ್ಚಾಗುವುದರಿಂದ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಕರ್ನಾಟಕದ ಬಹುತೇಕ ಕಡೆ ಇಂದಿನಿಂದ ಎರಡ್ಮೂರು ದಿನ ಮಳೆ ಜಾಸ್ತಿಯಾಗಲಿದೆ. ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹೆಚ್‌ಎಎಲ್ ಬಳಿಯ ರಮೇಶ್ ನಗರದಲ್ಲಿ ಗೋಡೆ ಕುಸಿತವಾಗಿದೆ. ಹೆಚ್‌ಎಎಲ್‌ಗೆ ಸೇರಿದ 12 ಅಡಿ ಎತ್ತರದ ಗೋಡೆ ಕುಸಿತವಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement