ಲಖಿಂಪುರ್ ಹಿಂಸಾಚಾರ: ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಜಿಲ್ಲೆಗೆ ಭೇಟಿ

ಲಖಿಂಪುರ್ ಖೇರಿ: ಲಖಿಂಪುರ್ ಹಿಂಸಾಚಾರದ ಕುರಿತು ರಾಜಕೀಯ ಆರಫ-ಪ್ರತ್ಯಾರೋಪಗಳ ನಡುವೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದ ಐದು ಸದಸ್ಯರ ನಿಯೋಗವು ಬುಧವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದೆ.
ಏತನ್ಮಧ್ಯೆ, ಈ ಘಟನೆಯ ವಿರುದ್ಧ ದೇಶಾದ್ಯಂತ ರಾಜಕೀಯ ಪಕ್ಷಗಳು ಮತ್ತು ರೈತ ಸಂಘಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೂಡ ಆ ಪ್ರದೇಶದಲ್ಲಿ ಸೆಕ್ಷನ್ 144 ಹೇರಲಾಗಿದೆ.
ಮಂಗಳವಾರದಂದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಿಯಾಂಕಾ ಗಾಂಧಿ ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಏಕೆ ಲಖಿಂಪುರ್ ಖೇರಿಗೆ ಭೇಟಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭಾನುವಾರ ಲಖಿಂಪುರ್ ಖೇರಿಗೆ ಭೇಟಿ ನೀಡಿದ ಪ್ರತಿಭಟನೆಯ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ಭೇಟಿ ಮಾಡಲು ಹೋಗುವ ದಾರಿಯಲ್ಲಿ ಪ್ರಿಯಾಂಕಾ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಸೋಮವಾರ ಬಂಧಿಸಲಾಯಿತು. ಅವರೆಲ್ಲರನ್ನೂ ಪ್ರಾಂತೀಯ ಸಶಸ್ತ್ರ ಕಾನ್ಸ್‌ಟಬ್ಯುಲರಿಯ 2 ನೇ ಬೆಟಾಲಿಯನ್‌ನ ಅತಿಥಿ ಗೃಹದಲ್ಲಿ ಬಂಧನದಲ್ಲಿರಿಸಲಾಗಿದೆ ಎಂದು ಸೀತಾಪುರ ಎಸ್‌ಡಿಎಂ ಪ್ಯಾರೆ ಲಾಲ್ ಮೌರ್ಯ ಹೇಳಿದರು.
ಲಖಿಂಪುರ್ ಹಿಂಸಾಚಾರದ ಎಫ್‌ಐಆರ್‌ನಲ್ಲಿ ಹತ್ಯೆ ಆರೋಪಗಳನ್ನು ಕೇಂದ್ರದ ಗೃಹ ರಾಜ್ಯ ಮಂತ್ರಿ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಹೊರಿಸಲಾಗಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಘಟನೆಯ ಸಮಯದಲ್ಲಿ ಗುಂಡು ಹಾರಿಸಿದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವರದಿ ಸರಿಯಾಗಿಲ್ಲ. ಬಹ್ರೈಚ್ ನಲ್ಲಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಎರಡು ಶವಗಳ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕೈತ್‌ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement