ಲಖಿಂಪುರ ಹಿಂಸಾಚಾರ ಪ್ರಕರಣ; ಘಟನಾ ಸ್ಥಳಕ್ಕೆ ಭೇಟಿ ನೀಡಲು ರಾಹುಲ್, ಪ್ರಿಯಾಂಕಾಗೆ ಕೊನೆಗೂ ಅನುಮತಿ

ನವದೆಹಲಿ: ಲಖನೌ ವಿಮಾನ ನಿಲ್ದಾಣದಲ್ಲಿ ನಡೆದ ಹೈಡ್ರಾಮಾ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೀತಾಪುರಕ್ಕೆ ತೆರಳುತ್ತಿದ್ದಾರೆ, ಜೊತೆಗೆ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಸಹ ತೆರಳುತ್ತಿದ್ದಾರೆ. ರಾಹುಲ್‌ ಗಾಂಧಿ ಹಿಂಸಾಚಾರದಲ್ಲಿ ಮೃತಪಟ್ಟ ದುಃಖದಲ್ಲಿರುವ ಕುಟುಂಬಗಳನ್ನು ಭೇಟಿ ಮಾಡಲು ಅವರು ಖೇರಿಗೆ ಭೇಟಿ ನೀಡುತ್ತಿದ್ದಾರೆ.
ಉತ್ತರ ಪ್ರದೇಶ ಸರ್ಕಾರವುರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ಲಖಿಂಪುರ್ ಖೇರಿಗೆ ಭೇಟಿ ನೀಡಲು ಅನುಮತಿ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಅವರು, ಬಿಜೆಪಿ ಸರ್ಕಾರವು ರೈತರನ್ನು ವ್ಯವಸ್ಥಿತವಾಗಿ ಪ್ರಚೋದಿಸಿ ಕೊಲ್ಲುತ್ತಿದೆ ಎಂದು ಆರೋಪಿಸಿದ್ದಾರೆ. ಭಾರತದ ರೈತರು ಸರ್ಕಾರದ ದಾಳಿಯನ್ನು ಎದುರಿಸುವ ಸಮಯ ಬಂದಿದೆ. ಭಾರತದ ರೈತರ ಮೇಲೆ ವ್ಯವಸ್ಥಿತ ದಾಳಿ ನಡೆಯುತ್ತಿದೆ. ಮೂರು ಕೃಷಿ ಕಾಣು ಹಾಗೂ ಭೂ ಸ್ವಾಧೀನ ಮಸೂದೆಯಿಂದ ಇದು ಆರಂಭವಾಗಿದೆ ಎಂದು ಅವರು ಹೇಳಿದರು.
ಏತನ್ಮಧ್ಯೆ, ಪ್ರಿಯಾಂಕಾ ಗಾಂಧಿಯನ್ನು 48 ಗಂಟೆಗಳಿಗಿಂತ ಹೆಚ್ಚು ಕಾಲ ಇರಿಸಲಾಗಿರುವ ಸೀತಾಪುರದಲ್ಲಿ ಉತ್ತರ ಪ್ರದೇಶ ಸರ್ಕಾರ ಅಂತರ್ಜಾಲವನ್ನು ಸ್ಥಗಿತಗೊಳಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement