4,445 ಕೋಟಿ ರೂ.ಗಳ ವೆಚ್ಚದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರ ಒಪ್ಪಿಗೆ

ನವದೆಹಲಿ: ದೇಶದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ 4,445 ಕೋಟಿ ರೂಪಾಯಿ ವೆಚ್ಚದಲ್ಲಿ ಏಳು ಜವಳಿ ಪಾರ್ಕ್ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಪಿಎಂ ಮೇಘಾ ಇಂಟಿಗ್ರೇಟೆಡ್ ಟೆಕ್ಸ್ ಟೈಲ್ಸ್ ರೀಜನ್ ಅಂಡ್ ಅಪಾರೆಲ್ಸ್ – ಪಿಎಂ ಮಿತ್ರ ಪಾರ್ಕ್ ದೇಶದ ವಿವಿಧ ಕಡೆ ಆರಂಭಿಸಲು ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿದೆ.
ಸಭೆಯ ಬಳಿಕ ಮಾಹಿತಿ ನೀಡಿದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಶ್ ಗೋಯಲ್ ಅವರು ಮುಂದಿನ ಐದು ವರ್ಷಗಳಲ್ಲಿ ಈ ಫಾರ್ ಗಳನ್ನು ದೇಶಾದ್ಯಂತ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ದೇಶದಲ್ಲಿ ಒಳಗಡೆ ಜವಳಿ ಪಾರ್ಕ್ ಆರಂಭವಾಗುವುದರಿಂದ ಜವಳಿ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಇದು ಸಹಕಾರಿಯಾಗಲಿದೆ ಜೊತೆಗೆ ಇದರಿಂದ ಉದ್ಯೋಗಾವಕಾಶಗಳು ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಉತ್ಪಾದನೆ ಆಧಾರಿತ ಬೋನಸ್:
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿ, ರೈಲ್ವೆ ಉದ್ಯೋಗಿಗಳಿಗೆ ಉತ್ಪಾದನೆ ಆಧಾರಿತ ಬೋನಸ್‌ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ. ಉತ್ಪಾದನೆ ಆಧಾರಿತ ಬೋನಸ್ 78 ದಿನಗಳ ವೇತನಕ್ಕೆ ಸರಿಸಮಾನವಾಗಿ ಇರಲಿದೆ ಎಂದು ಅವರು ಹೇಳಿದ್ದಾರೆ
2020-21 ರ ಹಣಕಾಸು ವರ್ಷದಲ್ಲಿ 11.56 ಲಕ್ಷ ನಾನ್ ಗೆಜೆಟೆಡ್ ಅಧಿಕಾರಿಗಳು ಮತ್ತು ಸಿಬ್ಬಯ ಇದರ ಸೌಲಭ್ಯ ಪಡೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ