ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಹಾನಗಲ್ ಗೆ ಅಚ್ಚರಿಯ ಆಯ್ಕೆ

ಬೆಂಗಳೂರು: ರಾಜ್ಯದಲ್ಲಿ ಅ.30ರಂದು ನಡೆಯಲಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಶಿವರಾಜ್ ಸಜ್ಜನರ್ ಅವರನ್ನು ಕಣಕ್ಕೆ ಇಳಿಸಿದ್ದು, ಅಚ್ಚರಿಯ ನಿರ್ಧಾರ ತೆಗೆದುಕೊಂಡಿದೆ. ಸಿಂದಗಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ರಮೇಶ್ ಭೂಸನೂರು ಅವರಿಗೆ ಟಿಕೆಟ್‌ ಘೋಷಿಸಿದೆ.
ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ ಹಾನಗಲ್ ಉಪ ಚುನಾವಣೆಗೆ ಕ್ಷೇತ್ರಕ್ಕೆ ಉದಾಸಿ ಅವರ ಸೊಸೆ, ಸಂಸದ ಶಿವಕುಮಾರ್ ಉದಾಸಿ ಅವರ ಪತ್ನಿ ರೇವತಿ ಉದಾಸಿ ಅವರ ಹೆಸರು ಕೇಳಿಬಂದಿತ್ತು. ಬೆಳಗಾವಿ ಲೋಕಸಭಾ ಉಪಚುನಾವಣೆಯಂತೆ ಹಾನಗಲ್ ನಲ್ಲೂ ಅನುಕಂಪದ ಆಧಾರದ ಮೇಲೆ ಉದಾಸಿ ಕುಟುಂಬಕ್ಕೆ ಟಿಕೆಟ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಬಿಜೆಪಿ ವರಿಷ್ಠರು ಮಾಜಿ ಶಿವರಾಜ್ ಸಜ್ಜನರ್ ಅವರಿಗೆ ಟಿಕೆಟ್ ನೀಡಿದೆ.
ಈ ಹಿಂದೆ ಶಿವರಾಜ್ ಅವರನ್ನು ದಿವಂಗತ ಸಿ.ಎಂ. ಉದಾಸಿ ಅವರನ್ನು ಬಿಜೆಪಿಗೆ ಕರೆದುಕೊಂಡು ಬಂದು ಸೂಕ್ತ ರಾಜಕೀಯ ಸ್ಥಾನಮಾನ ನೀಡಿದ್ದರು. 2004 ರಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು. 2013- 2018ರಲ್ಲಿ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement