ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ.
ರಾಜ್ಯದಲ್ಲಿ ಇಂದು (ಗುರುವಾರ) ಹೊಸದಾಗಿ 442 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 7 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 635 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,619 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೀದರ್, ಗದಗ ,ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಸೋಂಕು ದೃಢಪಟ್ಟಿಲ್ಲ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.36 ಕ್ಕೆ ಇಳಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ. 1.58 ಕ್ಕೆ ಇಳಿಕೆಯಾಗಿದೆ
ಹೊಸದಾಗಿ ದಾಖಲಾಗಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,79,773 ಕ್ಕೆ ಏರಿಕೆಯಾಗಿದೆ ಜೊತೆಗೆ ಚೇತರಿಸಿಕೊಂಡವರ ಸಂಖ್ಯೆ 29,30,264 ಕ್ಕೆ ಹೆಚ್ಚಳವಾಗಿದೆ.
ಸೋಂಕಿನಿಂದ ಒಟ್ಟಾರೆ ಮೃತಪಟ್ಟವರ ಸಂಖ್ಯೆ 37,861 ಕ್ಕೆ ಹೆಚ್ಚಳವಾಗಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement