ಅಕ್ಟೋಬರ್‌ 10 ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ದಸರಾ ರಜೆ

posted in: ರಾಜ್ಯ | 0

ಬೆಂಗಳೂರು : ರಾಜ್ಯದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಕ್ಟೋಬರ್‌ 10 ರಿಂದ 17 ರ ವರೆಗೆ ದಸರಾ ರಜೆ ಘೋಷಣೆ ಮಾಡಿ ಪದವಿ ಪೂರ್ಣ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪದವಿ ಪೂರ್ವ ತರಗತಿಗಳಿಗೆ ದಸರಾ ರಜೆ ನೀಡುವ ಸಲುವಾಗಿ ಪದವಿ ಪೂರ್ವ ಉಪನ್ಯಾಸಕರ ಸಂಘ ಇಲಾಖೆಗೆ ಮನವಿಯನ್ನು ಮಾಡಿಕೊಂಡಿತ್ತು. ಈ ಹಿಂದೆ ಅಕ್ಟೋಬರ್‌ … Continued

ಶಿಕ್ಷಕರ ಕಾರ್ಯ ಶ್ಲಾಘನೆ ಮಾಡಿದ ಸಚಿವ ನಾಗೇಶ, ಅಧಿಕಾರಿಗಳ ಕೆಲಸದ ಬಗ್ಗೆ ಅತೃಪ್ತಿ

ಕುಮಟಾ;ರಾಜ್ಯ ಪ್ರಾಥಮಿಕ ಮತ್ತು ಪ್ರಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಗುರುವಾರ sಸಂಜೆ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾ ನ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶೈಕ್ಷಣಿಕ ಸಭೆ ನಡೆಸಿದರು.ತಡ ರಾತ್ರಿ ೯ ಘಂಟೆಯ ತನಕ ಜಿಲ್ಲಾ ಶೈಕ್ಷಣಿಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಪನಿರ್ದೇಶಕರನ್ನು ಮತ್ತು ಬಿ.ಇ.ಒ ಮತ್ತಿತರ ಅಧಿಕಾರಿಗಳ ಮೇಲೆ ಜಿಲ್ಲೆಯ ಪ್ರಗತಿ ಬಗ್ಗೆ ತೆಗೆದುಕೊಂಡ ಕ್ರಮಗಳ … Continued

ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪ್ರೌಡಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದು, 2021-22 ನೇ ಸಾಲಿನಲ್ಲಿ ಸರ್ಕಾರಿ ಪ್ರೌಢ ಶಾಲೆಗಳಿಗೆ ಅವಶ್ಯವಿರುವ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಡಿಸಿದ್ದಾರೆ. ಪ್ರತಿವರ್ಷ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಆಯಾ ಶಾಲೆಯಲ್ಲಿ … Continued

ನಾನು ಆರ್‌ಎಸ್‌ಎಸ್‌ ಹೊಗಳಿದ್ದೆ ಎಂಬುದು ಅಪ್ಪಟ ಸುಳ್ಳು: ದೇವೇಗೌಡ

posted in: ರಾಜ್ಯ | 0

ಬೆಂಗಳೂರು: ನಾನು ಆರ್‌ಎಸ್‌ಎಸ್‌ ಹೊಗಳಿದ್ದೆ ಎನ್ನುವುದು ಅಪ್ಪಟ ಸುಳ್ಳು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧವಿಲ್ಲ. ಸುಳ್ಳು ಹೇಳುವುದಕ್ಕೂ ಮಿತಿ ಇದೆ. ಆರ್‌ಎಸ್‌ಎಸ್ ಬಗ್ಗೆ ನನಗೆ ಗಂಧವೂ ಗೊತ್ತಿಲ್ಲ. ನಾನು ಬೈಠಕ್‌ ನಲ್ಲಿ ಕೂತಿಲ್ಲ, ಹೊಗಳಿಯೂ ಇಲ್ಲ. ರಾಮ್‌ಲೀಲಾ ಮೈದಾನದಲ್ಲಿ ಯಾರ‍್ಯಾರು ಏನು ಹೇಳಿದರು … Continued

ಅಫ್ಘಾನಿಸ್ತಾನದ ಕುಂಡುಜ್‌ನ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ: ಕನಿಷ್ಠ 100 ಮಂದಿ ಸಾವು

ಅಮೆರಿಕ ಪಡೆಗಳು ದೇಶವನ್ನು ತೊರೆದ ನಂತರ ನಡೆದ ಅತ್ಯಂತ ದೊಡ್ಡ ರಕ್ತಪಾತದ ದಾಳಿಯಲ್ಲಿ ಅಫ್ಘಾನಿಸ್ತಾನದ ಕುಂಡುಜ್ ನಗರದ ಶಿಯಾ ಮಸೀದಿಯಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಶುಕ್ರವಾರ ಕನಿಷ್ಠ 100 ಜನರು ಮೃತಪಟ್ಟಿದ್ದಾರೆ. ಸ್ಫೋಟದಲ್ಲಿ ಶಿಯಾ ಅಲ್ಪಸಂಖ್ಯಾತ ಸಮುದಾಯದ ಹೆಚ್ಚಿನ ಸಂತ್ರಸ್ತರು ಗಾಯಗೊಂಡಿದ್ದಾರೆ. ಕುಂದುಜ್ ಪ್ರಾಂತೀಯ ಆಸ್ಪತ್ರೆಯ ವೈದ್ಯಕೀಯ ಮೂಲವೊಂದು ಹೇಳುವಂತೆ 35 ಸಾವುಗಳು ಮತ್ತು 50 … Continued

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ತಿರಸ್ಕರಿಸಿದ ಮುಂಬೈ ಕೋರ್ಟ್‌

ಮುಂಬೈ: ಮುಂಬೈ ಕರಾವಳಿಯಲ್ಲಿ ಗೋವಾಕ್ಕೆ ತೆರಳುವ ಕ್ರೂಸ್ ಹಡಗಿನ ಮಾದಕದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬಂಧಿಸಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಗುರುವಾರ, ಪ್ರಕರಣದ ಆರ್ಯನ್ ಖಾನ್ ಮತ್ತು ಇತರ ಏಳು ಆರೋಪಿಗಳನ್ನು ಹೆಚ್ಚುವರಿ ಮುಖ್ಯ … Continued

ಇದು ಅಧಿಕೃತ..ಏರ್‌ಇಂಡಿಯಾ ಬಿಡ್ ಗೆದ್ದ ಟಾಟಾ ಸನ್ಸ್, ಪುನಃ ಟಾಟಾ ಸುಪರ್ದಿಗೆ ಮಹಾರಾಜ

ನವದೆಹಲಿ: ಸಾಲದ ಭಾರಕ್ಕೆ ಕುಸಿಯುತ್ತಿರುವ ಏರ್ ಇಂಡಿಯಾದ ಉಕ್ಕಿನ ಹಕ್ಕಿಯ ಹೊಣೆ ಕೊನೆಗೂ ಟಾಟಾ ಸನ್ಸ್ ಪಾಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ DIPAM, ತುಹಿನ್ ಕಾಂತ ಪಾಂಡೆ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿ, ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ್ದಾರೆ, ಏರ್ ಇಂಡಿಯಾ ಕೊಳ್ಳಲು ಬಿಡ್ ಸಲ್ಲಿಸಿದ್ದ ಸಂಸ್ಥೆಗಳ ಪೈಕಿ ಟಾಟಾ ಸನ್ಸ್ , … Continued

ತಂದೆಯ ಗನ್‌ನಿಂದಲೇ ಹಾರಿದ ಗುಂಡು ತಾಗಿ ಮೆದುಳು ನಿಷ್ಕ್ರೀಯವಾಗಿದ್ದ ಮಗ ಸಾವು, ತಂದೆ ಅರೆಸ್ಟ್‌

posted in: ರಾಜ್ಯ | 0

ಮಂಗಳೂರು : ವೇತನ ಕೇಳಲು ಬಂದಿದ್ದ ನೌಕರನ ಜಗಳದ ವೇಳೆಯಲ್ಲಿ ಆಕಸ್ಮಿಕವಾಗಿ ತಂದೆಯ ಗನ್‌ನಿಂದಲೇ ಗುಂಡು ಸಿಡಿದು ಮೆದುಳು ನಿಷ್ಕ್ರೀಯವಾಗಿದ್ದ ಸುಧೀಂದ್ರ ಪ್ರಭು ( 16 ವರ್ಷ) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಮಾರ್ಗನ್ಸ್‌ ಗೇಟ್‌ನಲ್ಲಿ ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಸಂಸ್ಥೆಯಲ್ಲಿ ಅಶ್ರಫ್, ಚಂದ್ರಹಾಸ ಎಂಬ ಇಬ್ಬರು ಕೆಲಸಕ್ಕೆ ಸೇರಿದ್ದರು. … Continued

ಲಖಿಂಪುರ ಹಿಂಸಾಚಾರದ ವರದಿ; ತನಿಖೆ ತೃಪ್ತಿಕರವಾಗಿಲ್ಲ, ಆಶಿಶ್ ಮಿಶ್ರಾನನ್ನು ಇನ್ನೂ ಯಾಕೆ ಬಂಧಿಸಿಲ್ಲ: ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ಅಕ್ಟೋಬರ್ 3 ರಂದು ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದ ತನಿಖೆ ತೃಪ್ತಿಕರವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಇನ್ನೂ ಏಕೆ ಬಂಧಿಸಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದೆ ಹಾಗೂ ಸರ್ಕಾರ ಇದುವರೆಗೆ ಕೈಗೊಂಡ ಕ್ರಮದಿಂದ ತೃಪ್ತಿ ಹೊಂದಿಲ್ಲ ಎಂದೂ … Continued

ಪತ್ರಕರ್ತರಾದ ಮರಿಯಾ ರೆಸ್ಸಾ, ಡಿಮಿಟ್ರಿ ಮುರಾಟೋವ್ ಅವರಿಗೆ 2021ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಪ್ರಯತ್ನಗಳಿಗಾಗಿ ಮಾರಿಯಾ ರೆಸ್ಸಾ ಮತ್ತು ಡಿಮಿಟ್ರಿ ಮುರಾಟೋವ್ 2021ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಾರಿಯಾ ರೆಸ್ಸಾ ಫಿಲಿಪೈನ್ಸ್ ಮೂಲದ ಸುದ್ದಿ ಸಂಸ್ಥೆ ರಾಪ್ಲರ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾರೆ. ಹಾಗೂ ಡಿಮಿಟ್ರಿ ಆಂಡ್ರೆವಿಚ್ ಮುರಾಟೋವ್ ರಷ್ಯಾದ ಪತ್ರಿಕೆ ನೊವಾಯಾ ಗೆಜೆಟಾದ ಮುಖ್ಯ ಸಂಪಾದಕರಾಗಿದ್ದಾರೆ. ಪ್ರಶಸ್ತಿ ಪ್ರಕಟಿಸಿದ ನೊಬೆಲ್ ಶಾಂತಿ ಪ್ರಶಸ್ತಿ … Continued