ಬೆಂಗಳೂರು: ಆದಾಯ ತೆರಿಗೆ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಅವರನ್ನು ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಉಮೇಶ್ ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೂಡಲೇ ಉಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸೂಚನೆ ನೀಡಿದ್ದಾರೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಆಪ್ತ ಸಹಾಯಕರಾಗಿದ್ದ ಉಮೇಶ್ ಅವರಿಗೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ನಂತರ ಅವರ ಕಚೇರಿಯಲ್ಲಿ ಉದ್ಯೋಗ ನೀಡಲಾಗಿತ್ತು.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ