ಪತ್ರಕರ್ತರಾದ ಮರಿಯಾ ರೆಸ್ಸಾ, ಡಿಮಿಟ್ರಿ ಮುರಾಟೋವ್ ಅವರಿಗೆ 2021ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಪ್ರಯತ್ನಗಳಿಗಾಗಿ ಮಾರಿಯಾ ರೆಸ್ಸಾ ಮತ್ತು ಡಿಮಿಟ್ರಿ ಮುರಾಟೋವ್ 2021ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಮಾರಿಯಾ ರೆಸ್ಸಾ ಫಿಲಿಪೈನ್ಸ್ ಮೂಲದ ಸುದ್ದಿ ಸಂಸ್ಥೆ ರಾಪ್ಲರ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾರೆ. ಹಾಗೂ ಡಿಮಿಟ್ರಿ ಆಂಡ್ರೆವಿಚ್ ಮುರಾಟೋವ್ ರಷ್ಯಾದ ಪತ್ರಿಕೆ ನೊವಾಯಾ ಗೆಜೆಟಾದ ಮುಖ್ಯ ಸಂಪಾದಕರಾಗಿದ್ದಾರೆ.
ಪ್ರಶಸ್ತಿ ಪ್ರಕಟಿಸಿದ ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಯ ಅಧ್ಯಕ್ಷ ಬೆರಿಟ್ ರೀಸ್-ಆಂಡರ್ಸನ್, “ಮರಿಯಾ ರೆಸ್ಸಾ ಮತ್ತು ಡಿಮಿಟ್ರಿ ಮುರಾಟೋವ್ 2021 ರ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ ಈ ಇಬ್ಬರು ಪತ್ರಕರ್ತರು ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯ ಎದುರಿಸುತ್ತಿರುವ ಹೆಚ್ಚುತ್ತಿರುವ ಪ್ರತಿಕೂಲ ಪರಿಸ್ಥಿತಿಗಳಲ್ಲಿ ಈ ಆದರ್ಶಕ್ಕಾಗಿ ನಿಲ್ಲುವ ಎಲ್ಲ ಪತ್ರಕರ್ತರ ಪ್ರತಿನಿಧಿಗಳು ಎಂದು ಹೇಳಿದ್ದಾರೆ.
ಸ್ವತಂತ್ರ ಮತ್ತು ಸತ್ಯಾಧಾರಿತ ಪತ್ರಿಕೋದ್ಯಮವು ಅಧಿಕಾರ ದುರುಪಯೋಗ, ಸುಳ್ಳು ಮತ್ತು ಯುದ್ಧ ಪ್ರಚಾರದ ವಿರುದ್ಧ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ಕಾರ್ಯನಿರ್ವಹಿಸುತ್ತದೆ ಎಂದು ಅವರು ಹೇಳಿದರು.
ನಾರ್ವೇಜಿಯನ್ ನೊಬೆಲ್ ಸಮಿತಿಯು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿಯ ಸ್ವಾತಂತ್ರ್ಯವು ಪ್ರಜಾಪ್ರಭುತ್ವಕ್ಕೆ ನಿರ್ಣಾಯಕ ಪೂರ್ವಾಪೇಕ್ಷಿತಗಳಾಗಿವೆ ಮತ್ತು ಯುದ್ಧ ಮತ್ತು ಸಂಘರ್ಷದ ವಿರುದ್ಧ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮಾನವ ಹಕ್ಕುಗಳನ್ನು ರಕ್ಷಿಸುತ್ತವೆ. ಮಾರಿಯಾ ರೆಸ್ಸಾ ಮತ್ತು ಡಿಮಿಟ್ರಿ ಮುರಾಟೋವ್ ಅವರಿಗೆ 2021 ರ #ನೊಬೆಲ್ ಪೀಸ್ ಪ್ರೈಸ್ ಪ್ರಶಸ್ತಿಯನ್ನು ಈ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಮಹತ್ವವನ್ನು ಒತ್ತಿಹೇಳಲು ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ