ಭಾರತದಲ್ಲಿ 21,257 ಹೊಸ ಕೋವಿಡ್ ಪ್ರಕರಣ ದಾಖಲು, 205 ದಿನಗಳ ಕನಿಷ್ಠ ಮಟ್ಟಕ್ಕೆ ಬಂದ ಸಕ್ರಿಯ ಪ್ರಕರಣಗಳು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 21,257 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿಯ ಪ್ರಕಾರ, ಒಟ್ಟು ಚೇತರಿಕೆಯ ಪ್ರಮಾಣವು ಶೇಕಡಾ 97.96 ರಷ್ಟಿದೆ, ಇದು ಮಾರ್ಚ್ 2020ರ ನಂತರ ಅತಿ ಹೆಚ್ಚು ಮತ್ತು ಒಟ್ಟು ಚೇತರಿಕೆ 3,32,25,221 ಕ್ಕೆ ತಲುಪಿದೆ.
ಭಾರತದಲ್ಲಿ ಒಟ್ಟು ಕೋವಿಡ್ -19 ಸಕ್ರಿಯ ಪ್ರಕರಣಗಳು 2,40,221 ಕ್ಕೆ ಇಳಿದಿದ್ದು, 205 ದಿನಗಳಲ್ಲಿ ಕಡಿಮೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ 1% ಕ್ಕಿಂತ ಕಡಿಮೆ ಇದ್ದು ಪ್ರಸ್ತುತ, 0.71%ರಷ್ಟಿದೆ. ಮಾರ್ಚ್ 2020 ರಿಂದ ಕಡಿಮೆ. ಭಾರತದಲ್ಲಿ, ಕೋವಿಡ್‌ ಸಾಂಕ್ರಾಮಿಕ ರೋಗದಿಂದಾಗಿ ಮೊದಲ ಸಾವು ಮಾರ್ಚ್ 2020 ರಲ್ಲಿ ವರದಿಯಾಗಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಕಾರ, 58,00,43,190 ಮಾದರಿಗಳನ್ನು ಅಕ್ಟೋಬರ್ 7 ರವರೆಗೆ ಕೋವಿಡ್ -19 ಗಾಗಿ ಪರೀಕ್ಷಿಸಲಾಗಿದೆ. ಈ ಪೈಕಿ 13,85,706 ಮಾದರಿಗಳನ್ನು ಗುರುವಾರ ಪರೀಕ್ಷಿಸಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ