ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಪ್ರೌಡಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದು, 2021-22 ನೇ ಸಾಲಿನಲ್ಲಿ ಸರ್ಕಾರಿ ಪ್ರೌಢ ಶಾಲೆಗಳಿಗೆ ಅವಶ್ಯವಿರುವ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಡಿಸಿದ್ದಾರೆ.
ಪ್ರತಿವರ್ಷ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಆಯಾ ಶಾಲೆಯಲ್ಲಿ ಮಂಜೂರಾಗಿ ಖಾಲಿ ಇರುವ ವಿಷಯ ಬೋಧಕ ಶಿಕ್ಷಕರ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರನ್ನೇ ನೇಮಕ ಮಾಡಿಕೊಳ್ಳಲಾಗುತ್ತದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆದುರಾಗಿ ಒಟ್ಟು 3253 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಅತಿಥಿ ಶಿಕ್ಷಕರಿಗೆ ಗೌರವಧನ ಪಾವತಿಸಲು ಜಿಲ್ಲಾವಾರು ಮತ್ತು ತಾಲೂಕಾವಾರು ಶಿಕ್ಷಕರ ಹಾಗೂ ಅನುದಾನದ ವಿವರಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದೆ.
ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರದ ಆದೇಶದ ಕ್ರಮಗಳಂತೆ ಅತ್ಯಂತ ಅವಶ್ಯಕತೆ ಇರುವ ಕಡೆ ವಿಷಯವಾರು ಖಾಲಿ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೆಲವು ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದ್ದು, ಸುತ್ತೋಲೆಯಲ್ಲಿ ಲಗತ್ತಿಸಿದ ನಿಯಮದಂತೆ ಕ್ರಮ ಕೈಗೊಳ್ಳಲು ಅವರು ಸೂಚನೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement