ಆರೆಸ್ಸೆಸ್‌ ಇರದಿದ್ದರೆ ಭಾರತ ಮೂರ್ನಾಲ್ಕು ಪಾಕಿಸ್ಥಾನವಾಗ್ತಿತ್ತು : ಶೆಟ್ಟರ್

ಹುಬ್ಬಳ್ಳಿ: ಕೇವಲ ಮತಬ್ಯಾಂಕ್‍ಗಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು.
ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇಲ್ಲದಿದ್ದರೆ ಈ ವೇಳೆಗೆ ಭಾರತ ಮೂರ್ನಾಲ್ಕು ಪಾಕಿಸ್ಥಾನ ಆಗುತ್ತಿತ್ತು. ದೇಶಪ್ರೇಮ ಸಂಘಟನೆ ಬಗ್ಗೆ ಇಲ್ಲಸಲ್ಲದ ಟೀಕೆ ಮೂಲಕ ಇಬ್ಬರು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತಂದುಕೊಳುತ್ತಿದ್ದಾರೆ ಎಂದರು.
ಸಂಘ-ಬಿಜೆಪಿ ಒಂದೇ ನಾವು ಸಂಘ ಮೂಲದಿಂದ ಬಂದವರು. ಇಂದಿಗೂ ಸಂಘ ಕಾರ್ಯಕರ್ತರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ಹೇಳಿದ್ದಾರೆ.
ಸಂಘ ಇದ್ದ ಕಾರಣಕ್ಕೆ ದೇಶದಲ್ಲಿ ಸುರಕ್ಷತೆ, ಜನರಿಗೆ ಗೌರವ ಇದೆ. ಮತಬ್ಯಾಂಕ್‍ಗಾಗಿ ಆರ್‍ಎಸ್‍ಎಸ್ ಬಗ್ಗೆ ಕೀಳಾಗಿ ಮಾತನಾಡುವುದನ್ನು ಸಿದ್ದರಾಮಯ್ಯ, ಕುಮಾರಸ್ವಾಮಿ ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಆರ್‌ಎಸ್‌ಎಸ್‌ ಟೀಕಿಸಿದರೆ ಮುಸ್ಲಿಂ ಮತದಾರರು ತಮ್ಮ ಪರವಾಗುತ್ತಾರೆಂಬ ಭ್ರಮೆಯಲ್ಲಿದ್ದಾರೆ. ಮುಸ್ಲಿಮರಿಗೂ ಇವರ ಬಂಡವಾಳ ಗೊತ್ತಾಗಿದ್ದು, ಅನೇಕರು ಬಿಜೆಪಿ ಸೇರಿದ್ದಾರೆ. ಸಂಘ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement