ಸುರತ್ಕಲ್: ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್

ಮಂಗಳೂರು: ಕೋಮು ಪ್ರಚೋದನೆ ಭಾಷಣ ಮಾಡಿದ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅ‌ಕ್ಟೋಬರ್ 4ರಂದು ಸುರತ್ಕಲ್​ನಲ್ಲಿ ಭಜರಂಗದಳ ಮತ್ತು ದುರ್ಗಾ ವಾಹಿನಿ ಸುರತ್ಕಲ್ ಪ್ರಖಂಡ ಜನಜಾಗೃತಿ ಸಭೆಯಲ್ಲಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ ಅವರು ಭಾಷಣದಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು ಎಂದು ಆರೋಪಿಸಲಾಗಿದೆ.
ಅವರು ತಮ್ಮ ಭಾಷಣದಲ್ಲಿ ಒಂದು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು. ಅವರ ಭಾಷಣದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು ಅಲ್ಲದೇ ಸುರತ್ಕಲ್​ನಲ್ಲಿ ಅವರು ಮಾಡಿದ ಭಾಷಣ ವಿವಾದದ ಕಿಡಿಯನ್ನೇ ಹೊತ್ತಿಸಿತ್ತು. ಭಾಷಣದ ಸುತ್ತ ವಾದ ವಿವಾದದ ಮಾತುಗಳು ಕೇಳಿಬಂದಿದ್ದವು.

0 / 5. 0

ಪ್ರಮುಖ ಸುದ್ದಿ :-   ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement