ಕರ್ನಾಟಕದಲ್ಲಿ ಅ.13ರವರೆಗೂ ಭಾರಿ ಮಳೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 13ರ ವರೆಗೂ ಮಳೆ ಮುಂದುವರೆಯಲಿ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದ್ದು, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅ.9ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement