ಲಖೀಂಪುರ್ ಖೇರಿ ರೈತ ಹತ್ಯಾಕಾಂಡ; ಪೊಲೀಸ್ ವಿಚಾರಣೆಗೆ ಕೊನೆಗೂ ಹಾಜರಾದ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ

ಲಕ್ನೋ : ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕಾರು ಹಾಯಿಸಿರುವ ಆರೋಪಿಯಾಗಿವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಇಂದು (ಶನಿವಾರ) ಲಖಿಂಪುರ್ ಖೇರಿಗೆ ಹತ್ತಾರು ಪೊಲೀಸರ ಬೆಂಗಾವಲಿನಲ್ಲಿ ವಿಚಾರಣೆಗೆ ಆಗಮಿಸಿದ್ದಾರೆ.
ಐದು ದಿನಗಳ ನಂತರವೂ ಆಶಿಶ್‌ನನ್ನು ಬಂಧಿಸದಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಉತ್ತರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.
ಇದರಲ್ಲಿ ನಾಲ್ವರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಂತರ ನಡೆದ ಹಿಂಸಾಚಾರದಲ್ಲಿ 5 ಜನ ಮೃತಪಟ್ಟಿದ್ದಾರೆ. ಘಟನೆ ನಡೆದ ನಂತರ ಸಚಿವರ ಪುತ್ರ ಆಶೀಶ್​ ಮಿಶ್ರಾ ಪರಾರಿಯಾಗಿದ್ದರು. ಈ ಘಟನೆಗೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸುಪ್ರೀಂ ಕೋರ್ಟ್ (Supreme Court) ಸೇರಿದಂತೆ ವಿವಿಧ ಕಡೆಗಳಿಂದ ಒತ್ತಡ ಹೆಚ್ಚಾದ ಕಾರಣ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ವಾರೆಂಟ್ ಸಹ ನೀಡಲಾಗಿತ್ತು. ಹೀಗಾಗಿ ಆಶೀಶ್ ಮಿಶ್ರಾ ಇಂದು (ಶನಿವಾರ) ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಅಕ್ಟೋಬರ್‌ 3 ರಂದು (ಭಾನುವಾರ) ನಡೆದ ರೈತರ ಹತ್ಯಾಕಾಂಡ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ದೇಶದಾದ್ಯಂತ ಪ್ರತಿಭಟನೆ ನಡೆದಿತ್ತು. ಬಳಿಕ ಸೋಮವಾರ ಉತ್ತರ ಪ್ರದೇಶ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು.
ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡಿನಲ್ಲಿ ಪ್ರತಿಭಟನೆ ನಡೆಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ರೈತರ ಮೇಳೆ ಕಾರು ಹರಿಸಿ ನಾಲ್ವರ ರೈತರ ಹತ್ಯೆಗೆ ಕಾರಣರಾಗಿದ್ದಾರೆ ಎಂದು ರೈತರು ಆರೋಪಿಸಿದ್ದರು. ಈ ಸಂಬಂಧ ರೈತರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆಶಿಶ್ ಮಿಶ್ರಾ ಮತ್ತು 15 ರಿಂದ 20 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಕ್ರಿಮಿನಲ್ ಪಿತೂರಿ ಮತ್ತು ಗಲಭೆ ಇತ್ಯಾದಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಐದು ದಿನಗಳ ನಂತರವೂ ಆಶಿಶ್‌ನನ್ನು ಬಂಧಿಸದಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಉತ್ತರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಉತ್ತರ ಪ್ರದೇಶ ಪೊಲೀಸರು ಗುರುವಾರ ಆಶಿಶ್ ಮಿಶ್ರಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಆದರೆ, ಆವರು ಹಾಜರಾಗಿರಲಿಲ್ಲ.
ನಂತರ ಪೊಲೀಸ್ ಅಧಿಕಾರಿಗಳು ಶುಕ್ರವಾರ ಎರಡನೇ ಬಾರಿ ಸಮನ್ಸ್ ನೀಡಿದ್ದರು. ಆರೋಪಿ ಆಶಿಶ್ ಲಖಿಂಪುರದಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆಯೊಳಗೆ ವಿಚಾರಣೆಗಾಗಿ ಅಪರಾಧ ವಿಭಾಗದ ಮುಂದೆ ಹಾಜರಾಗುವಂತೆ ಸೂಚಿದ್ದರು.
ಆಶಿಶ್ ನೇಪಾಳಕ್ಕೆ ಪರಾರಿಯಾಗಿದ್ದಾರೆ ಮತ್ತು ತಾನಿರುವ ಸ್ಥಳವನ್ನು ಪದೇ ಪದೇ ಬದಲಾಯಿಸುತ್ತಿದ್ದನೆಂಬ ಮಾಧ್ಯಮದ ವರದಿಗಳನ್ನು ನಿರಾಕರಿಸಿದ್ದ ಸಚಿವ ಅಜಯ್ ಮಿಶ್ರಾ, ತನ್ನ ಮಗ ಲಖಿಂಪುರದ ಮನೆಯಲ್ಲಿದ್ದಾನೆ. ಆತ ಶನಿವಾರ ಪೊಲೀಸರ ಮುಂದೆ ಹಾಜರಾಗುತ್ತಾನೆ ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement