ದಸರಾ ನಂತರ 1-5ನೇ ತರಗತಿ ಪ್ರಾರಂಭ: ನಾಗೇಶ

ಉಡುಪಿ: ರಾಜ್ಯದಲ್ಲಿ ೧ ರಿಂದ ೫ರ ವರೆಗೆ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ದಸರಾ ಹಬ್ಬದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅವರೂ ಕೂಡ ಸಹಮತಿ ವ್ಯಕ್ತಪಡಿಸಿದ್ದಾರೆ. ಹಬ್ಬದ ಬಳಿಕ ಸಭೆ ನಡೆಸಿ, ಯಾವಾಗಿನಿಂದ ಶಾಲೆ ಆರಂಭಿಸಬೇಕು ಎನ್ನುವುದುರ ಕುರಿತು ನಿರ್ಧರಿಸಲಾಗುವುದು ಎಂದು ತಿಳಿಸಿದರು.
ದೇವರ ದಯೆಯಿಂದ ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಕಡಿಮೆಯಾಗುತ್ತಿದೆ. ದಸರಾ ಹಬ್ಬದ ಬಳಿಕ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಚರ್ಚಿಸಿ ಮುಖ್ಯಮಂತ್ರಿಗಳು ದಿನಾಂಕ ಪ್ರಕಟಿಸಲಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ಕೆಲವು ಜಿಲ್ಲೆಗಳಲ್ಲಿ ಒಂದೂ ಪ್ರಕರಣಗಳು ದಾಖಲಾಗುತ್ತಿಲ್ಲ ಎಂಬುದು ಸಂತಸದ ವಿಚಾರ. ಹೀಗಾಗಿ
೧ ರಿಂದ ೫ನೇ ತರಗತಿಗಳನ್ನು ಆರಂಭಕ್ಕೆ ಸರ್ಕಾರ ಮುಂದಾಗಿದೆ. ಆದರೆ ಯಾವಾಗ ಆರಂಭಿಸಬೇಕು ಎಂದು ನಿರ್ಧಾರ ಕೈಗೊಳ್ಳಬೇಕಿದೆ. ೬ ರಿಂದ ಉನ್ನತ ಶಿಕ್ಷಣದವರೆಗೆ ಭೌತಿಕ ತರಗತಿಗಳು ಆರಂಭವಾಗಿರುವುದರಿಂದ ೧ ರಿಂದ ೫ನೇ ತರಗತಿಗಳನ್ನು ಆರಂಭಿಸುವ ಕುರಿತು ಪೋಷಕರಿಂದ ಹೆಚ್ಚಿನ ಒತ್ತಡ ಕೇಳಿಬರುತ್ತಿದೆ.
ಈ ಸಂಬಂಧ ಸರ್ಕಾರ ಶೀಘ್ರದಲ್ಲೇ ದಿನಾಂಕದ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ..

ಪ್ರಮುಖ ಸುದ್ದಿ :-   ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement