ಮೈಸೂರು ವಿವಿಯಲ್ಲಿ ಚಿನ್ನದ ಪದಕ ಪಡೆದ ಗೃಹಿಣಿಯ ಅನುಮಾನಾಸ್ಪದ ಸಾವು

ಮೈಸೂರು: ಮೈಸೂರು ವಿಶ್ವ ವಿದ್ಯಾಲಯದಲ್ಲಿ ಚಿನ್ನದ ಪದಕ ಪಡೆದಿದ್ದ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮೈಸೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಡೇನಹಳ್ಳಿಯ ಆಶಾ ಎಂಬುವವರು ಮೃತ ಗೃಹಿಣಿ. ಇವರು ಮಳವಳ್ಳಿಯ ನಾಗಾಪ್ರಸಾದ್ ಎಂಬುವವರನ್ನು ಪ್ರೀತಿಸಿ ಎಂಟು ವರ್ಷದ ಹಿಂದೆ ಮದುವೆಯಾಗಿದ್ದರು.
ತವರು ಮನೆಯಿಂದ ಹಣ ತರುವಂತೆ ಗಂಡನಿಂದ ನಿರಂತರ ಕಿರುಕುಳವಾಗುತ್ತಿತ್ತು. ಈ ಬಗ್ಗೆ ಎರಡು ಬಾರಿ ಪೋಲಿಸ್ ಸ್ಟೇಷನ್‌ನಲ್ಲಿ ದೂರು ದಾಖಲಾಗಿತ್ತು.
ಗಂಡನ ಮನೆಯವರಿಂದ ಕಿರುಕುಳ ಆಗುತ್ತಿದೆ ಎಂದು ಆಶಾ ತವರು ಮನೆಯವರಿಗೆ ಕರೆ ಮಾಡಿ ಹೇಳಿದ್ದರು ಎಂದು ಹೇಳಲಾಗುತ್ತಿದೆ. ನಾಗಪ್ರಸಾದ್ ಪತ್ನಿಯ ತವರು ಮನೆಗೆ ಫೋನ್ ಮಾಡಿ ನಿಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾನೆ ಎಂದು ಪೋಷಕರು ತಿಳಿಸಿದ್ದು, ಆದರೆ ಅವರು ಅದೊಂದು ಕೊಲೆ ಎಂಬ ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement