ಅತಿಥಿ ಉಪನ್ಯಾಸಕರ ಕಾಯಂ ಅಸಾಧ್ಯ: ಸಚಿವ ಡಾ.ಅಶ್ವತ್ಥನಾರಾಯಣ

posted in: ರಾಜ್ಯ | 0

ಬೀದರ: ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ಹೀಗಾಗಿ ಅವರನ್ನು ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಕಾಯಂ ಕುರಿತು ಸುಳ್ಳು ಆಶ್ವಾಸನೆ ಕೊಡುವುದಿಲ್ಲ. ಅವರ ಸೇವೆಯನ್ನು ಪ್ರತಿ ವರ್ಷದಂತೆ ಮುಂದುವರೆಸಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ವಿದ್ಯಾರ್ಥಿಗಳ ಅನುಪಾತದಲ್ಲಿ ಉಪನ್ಯಾಸಕರ ನೇಮಕಾತಿ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಆದ್ಯತೆ ನೀಡಲಾಗುತ್ತದೆ. ಅಲ್ಲದೆ, ಅತಿಥಿ ಉಪನ್ಯಾಸಕರ ಸಂಭಾವನೆ ಹೆಚ್ಚಳ ಮಾಡುವ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಜತೆ ಚರ್ಚೆ ಮಾಡಿದ್ದೇನೆ. ಶೀಘ್ರವೇ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಹೊಸ ಉಪನ್ಯಾಸಕ ನೇಮಕಾತಿಯನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಅರ್ಹತೆಯುಳ್ಳ ಸರ್ವರಿಗೂ ಪರೀಕ್ಷೆ ಬರೆಯಲು ಅವಕಾಶ ಇದೆ. ಮೆರಿಟ್ ಮತ್ತು ಮೀಸಲಾತಿ ಅನ್ವಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ತಿಳಿಸಿದರು.
ಕಾನೂನು ಹಾಗೂ ವೈದ್ಯಕೀಯ ಶಿಕ್ಷಣ ಬಿಟ್ಟು ಉಳಿದ ಎಲ್ಲ ಶಿಕ್ಷಣ ಕೋರ್ಸುಗಳಲ್ಲಿ ರಾಷ್ಟ್ರಿಯ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ. ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕ, ಹೊಸ ಹೊಸ ಕಾಲೇಜುಗಳ ಸ್ಥಾಪನೆಯಂತಹ ಹಲವಾರು ಪ್ರಕ್ರಿಯೆಗಳ ವೇಗಗೊಳಿಸುವ ಪ್ರಯತ್ನವನ್ನೂ ಹೊಸ ಶಿಕ್ಷಣ ನೀತಿಯಲ್ಲಿ ಅಳವಡಿಸಲಾಗುತ್ತಿದೆ ಎಂದರು.

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ