ಫೋನ್ ಕದ್ದಾಲಿಕೆ, ಮಾಹಿತಿ ಸೋರಿಕೆ ಪ್ರಕರಣ:ಸಿಬಿಐ ಮುಖ್ಯಸ್ಥರಿಗೆ ಮುಂಬೈ ಪೊಲೀಸರಿಂದ ಸಮನ್ಸ್..!

ಮುಂಬೈ: ಮಹಾರಾಷ್ಟ್ರದ ಗುಪ್ತಚರ ಇಲಾಖೆಯ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ ಅವರಿಗೆ ಮುಂಬೈ ಪೊಲೀಸರ ಸೈಬರ್ ಸೆಲ್ ಸಮನ್ಸ್ ನೀಡಿದೆ.
ಸುಬೋಧ್ ಜೈಸ್ವಾಲ್ ಅವರಿಗೆ ಸಮನ್ಸ್ ಅನ್ನು ಇ-ಮೇಲ್ ಮೂಲಕ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ಗುರುವಾರ ಅಂದರೆ ಅಕ್ಟೋಬರ್ 14 ರಂದು ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ. ಅವರು ತಮ್ಮ ಹೇಳಿಕೆಗಳನ್ನು ಸೈಬರ್ ಸೆಲ್‌ನಲ್ಲಿ ದಾಖಲಿಸಬೇಕು.
ಮಹಾರಾಷ್ಟ್ರ ಕೇಡರ್‌ನ 1985ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಜೈಸ್ವಾಲ್, ಈ ವರ್ಷದ ಮೇನಲ್ಲಿ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ(ಸಿಬಿಐ) ಮುಖ್ಯಸ್ಥರಾಗಿ ನೇಮಕಗೊಂಡರು.
ಈ ಪ್ರಕರಣವು ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರು ಮಹಾರಾಷ್ಟ್ರದಲ್ಲಿ ಪೋಲಿಸ್ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸಿದ್ಧಪಡಿಸಿದ ವರದಿಯ ‘ಸೋರಿಕೆ’ಗೆ ಸಂಬಂಧಿಸಿದ್ದಾಗಿದೆ. ಈ ಅವಧಿಯಲ್ಲಿ ಜೈಸ್ವಾಲ್ ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರಾಗಿದ್ದರು. ತನಿಖೆಯ ಸಮಯದಲ್ಲಿ, ಹಿರಿಯ ನಾಯಕರು ಮತ್ತು ಅಧಿಕಾರಿಗಳ ಫೋನ್ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡಲಾಗಿದೆ ಮತ್ತು ಉದ್ದೇಶಪೂರ್ವಕವಾಗಿ ವರದಿಗಳನ್ನು ಸೋರಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಸೈಬರ್ ಸೆಲ್ ಈ ಬಗ್ಗೆ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಶುಕ್ಲಾ ಅಥವಾ ಇತರ ಯಾವುದೇ ಅಧಿಕಾರಿಯ ಹೆಸರಿಲ್ಲ.
ಈ ವಿಷಯದಿಂದ ರಾಜಕೀಯ ವಿವಾದ ಆರಂಭವಾಗಿತ್ತು. ಬಾಂಬೆ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಪ್ರಮುಖ ಸುದ್ದಿ :-   ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ... : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement