ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್‌ ಅವಸ್ಥಿ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್‌ ಅವಸ್ಥಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಅವಸ್ಥಿ ಅವರಿಗೆ ಪ್ರಮಾಣವಚನ ಬೋಧನೆ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.

0 / 5. 0

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ನಿಮ್ಮ ಕಾಮೆಂಟ್ ಬರೆಯಿರಿ

advertisement