ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ

ಕಲಬುರಗಿ: ಜಿಲ್ಲೆಯ ಹಲವೆಡೆ ಭೂಮಿ ಮತ್ತೆ ಕಂಪಿಸಿದೆ ಎಂದು ವರದಿಯಾಗಿದೆ. ಚಿಂಚೋಳಿ, ಕಾಳಗಿ ತಾಲೂಕಿನಲ್ಲಿ ಲಘು ಭೂಕಂಪನ ಉಂಟಾಗಿದ್ದು, ಕೋಡ್ಲಿ, ಹೊಡೆಬಿರನಳ್ಳಿ, ಗಡಿಕೇಶ್ವರ, ಹೊಸಳ್ಳಿ ಸೇರಿ, 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ ಎಂದು ವರದಿಯಾಘಿದೆ.
ರಾತ್ರಿ 9.52ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವ ಆಗಿದೆ. ರಿಕ್ಟರ್​ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. ಪದೇ ಪದೆ ಭೂಮಿ ಕಂಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದೆ.
ಜಿಲ್ಲೆಯ ಹಲವೆಡೆ ಮೊನ್ನೆ ಸಹ ಭೂಕಂಪನವಾಗಿತ್ತು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ಹಲಚೇರಾ, ತೇಗಲತಿಪ್ಪಿ, ಬೆನಕನಳ್ಳಿ, ಭೂತನೂರ, ಹೊಸಳ್ಳಿ ಸೇರಿ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿತ್ತು.
ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಅಕ್ಟೋಬರ್ 9ರಂದು ಕೂಡ ಲಘು ಭೂಕಂಪದ ಅನುಭವವಾಗಿತ್ತು. ನಸುಕಿನ ಜಾವ 5.40 ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನದ ಅನುಭವವಾಗಿತ್ತು. ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿದ್ದು, ಆತಂಕದಿಂದ ಮನೆಯಿಂದ ಹೊರಬಂದ ಗ್ರಾಮಸ್ಥರು ಮಳೆಯಲ್ಲಿಯೇ ಕಾಲ ಕಳೆದಿದ್ದರು.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement