ಕಾಶ್ಮೀರದಲ್ಲಿ ಎನ್‌ ಕೌಂಟರಿನಲ್ಲಿ ಇಬ್ಬರು ಉಗ್ರರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಹ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.
ಅನಂತ್‍ನಾಗ್ ಜಿಲ್ಲೆಗಳ ಗಡಿ ಭಾಗಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಯೋಧರು ನಡೆಸಿದ ದಾಳಿಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ.
ಈ ಘಟನೆಯಲ್ಲಿ ಒಬ್ಬ ಪೊಲೀಸ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರೀತಿ ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ಮತ್ತೊಂದು ಕಾರ್ಯಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಪ್ರಮುಖ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ.
ಶಹಾಗುಂದ್ ಪ್ರದೇಶದಲ್ಲಿ ನಾಗರೀಕರ ಮೇಲೆ ದಾಳಿ ಮಾಡಿದ್ದ ಆರೋಪ ಎದುರಿಸುತ್ತಿದ್ದ ಇಮ್ತಿಯಾಜ್ ಆಹಮದ್ ದಾರ್ ಎನ್‍ಕೌಂಟರ್‍ನಲ್ಲಿ ಮೃತಪಟ್ಟಿದ್ದಾನೆ ಎಂದು ಐಜಿಪಿ ವಿಜಯ್‍ಕುಮಾರ್ ಟ್ವಿಟ್ ಮಾಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ