ಹುಬ್ಬಳ್ಳಿಯಲ್ಲಿ ಪೊಲೀಸರಿಂದಲೇ ಗಾಂಜಾ ಮಾರಾಟದ ಆರೋಪ; ಪಿಐ ಸೇರಿ 7 ಸಿಬ್ಬಂದಿ ಅಮಾನತು!

ಹುಬ್ಬಳ್ಳಿ: ಅಪರಾಧಗಳನ್ನು ತಡೆಗಟ್ಟಬೇಕಾದ ಪೊಲೀಸರೇ ಅಪರಾಧ ಕೃತ್ಯಕ್ಕೆ ಇಳಿದರೆ… ಇಂಥದ್ದೊಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಅಪರಾಧಗಳನ್ನು ತಡೆಯಬೇಕಾದ ಪೊಲೀಸರಿಂದಲೇ ಅಪರಾಧ ಕೃತ್ಯ ನಡೆಸಿದ್ದಾರೆ. ತಾವು ವಶಪಡಿಸಿಕೊಂಡ ಗಾಂಜಾವನ್ನೇ ಖಾಕೀ ಪಡೆ ಮಾರಾಟ ಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಆ ಠಾಣೆಯಲ್ಲಿ ಎಲ್ಲರನ್ನೂ ಈಗ ಅಮಾನತು ಮಾಡಲಾಗಿದೆ.
ವಶಪಡಿಸಿಕೊಂಡ ಗಾಂಜಾವನ್ನು ಪೊಲೀಸರೇ ಮಾರಾಟ ಮಾಡುತ್ತಿದ್ದರೆಂಬ ಅಂಶ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 30 ರಂದು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಬಂಧಿಸಿದ್ದ ನವನಗರದ ಎಪಿಎಂಸಿ ಠಾಣೆ ಪೊಲೀಸರು ಅವರಿಂದ ಹಣ ಪಡೆದಿದ್ದರು. ಯಾವುದೇ ಕ್ರಮ ಕೈಗೊಳ್ಳದೆ ಬಿಟ್ಟು ಕಳಿಸಿದ್ದರೆಂಬ ಆರೋಪ ಕೇಳಿ ಬಂದಿತ್ತು. ಆರೋಪಿಗಳಿಂದ ವಶಪಡಿಸಿಕೊಂಡ ಗಾಂಜಾವನ್ನು ತಾವೇ ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್​ಪೆಕ್ಟರ್ ಸೇರಿ 7 ಮಂದಿ ಅಮಾನತು ಮಾಡಲಾಗಿದೆ‌ ಎಂದು ನ್ಯೂಸ್‌18 ಕನ್ನಡ.ಕಾಮ್ ವರದಿ ಮಾಡಿದೆ.
ವರದಿ ಪ್ರಕಾರ, ವಶಕ್ಕೆ ಪಡೆದ 1.5 ಕೆ.ಜಿ ಗಾಂಜಾ ಮಾರಾಟ ಮಾಡಿದ್ದ ನವನಗರ ಪೊಲೀಸ್ ಇನ್ಸಪೆಕ್ಟರ್ ಸೇರಿ 7 ಮಂದಿಯನ್ನು ಅಮಾನತು ಮಾಡಲಾಗಿದೆ.  ಗಾಂಜಾ ಮಾರಾಟ ಮಾಡಿರುವುದು ಕಂಡು ಬಂದ ಹಿನ್ನೆಲೆ ಕಮಿಷನರ್ ಲಾಭೂರಾಮ್ ಅಮಾನತು ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಆಯುಕ್ತರೂ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದಾರೆ. ತಕ್ಷಣವೇ ಪೊಲೀಸ್ ಅಧಿಕಾರಿ ಸೇರಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇಲಾಖಾ ತನಿಖೆಯ ನಂತರ ಪೊಲೀಸರು ಆರೋಪಿಗಳಿಂದ ಪೀಕಿದ್ದೆಷ್ಟು, ಅವರಿಂದ ವಶಪಡಿಸಿಕೊಂಡಿದ್ದ ಗಾಂಜಾ ಎಷ್ಟು, ಅದನ್ನು ಯಾರಿಗೆ, ಎಷ್ಟಕ್ಕೆ ಮಾರಿದರು ಎಂಬಿತ್ಯಾದಿ ಅಂಶಗಳು ಬೆಳಕಿಗೆ ಬರಲಿವೆ.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement