ಆರ್ಯನ್‌ ಗುರಿಯಾಗಲು, ಖಾನ್ ಸರ್ ನೇಮ್ ಕಾರಣ”: ನಾಲಿಗೆ ಹರಿಬಿಟ್ಟ ಮೆಹಬೂಬಾ ಮುಫ್ತಿ

ಶ್ರೀನಗರ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಡ್ರಗ್‌ ಪ್ರಕರಣದಲ್ಲಿ ಬಂಧನ ಆಗಿರುವ ವಿಚಾರದಲ್ಲಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ವಿರುದ್ಧ ಪಿಡಿಪಿ ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ.
“ಕೇವಲ ಸರ್‌ನೇಮ್‌ ಖಾನ್‌ ಎಂದು ಇರುವುದಕ್ಕೆ ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರನ್ನು ಕೇಂದ್ರದ ತನಿಖಾ ಸಂಸ್ಥೆಗಳು ಗುರಿಯಾಗಿಸಿಕೊಂಡಿದೆ. ಬಿಜೆಪಿಯು ತನ್ನ ಮತ ಬ್ಯಾಂಕ್‌ ಅನ್ನು ತುಂಬಿಸಿಕೊಳ್ಳಲು ಮುಸ್ಲಿಮರನ್ನು ಟಾರ್ಗೆಟ್‌ ಮಾಡುತ್ತಿದೆ,” ಎಂದು ಆರೋಪಿಸಿದ್ದಾರೆ.
ಈ ವಿಚಾರದಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್‌ ಮಾಡಿರುವ ಪಿಡಿಪಿ ಮುಖ್ಯಸ್ಥೆ ಕೇವಲ ಖಾನ್‌ ಎಂಬ ಉಪನಾಮವನ್ನು ನೋಡಿ ಗುರಿಯಾಗಿಸಿಕೊಳ್ಳಲಾಗಿದೆ,” ಎಂದು ಆರೋಪಿಸಿದ್ದಾರೆ.
ನಾಲ್ಕು ಮಂದಿ ರೈತರ ಹತ್ಯೆ ಮಾಡಿದ ಆರೋಪವನ್ನು ಹೊತ್ತಿರುವ ಕೇಂದ್ರ ಸಚಿವರ ಪುತ್ರನ ಹಿಂದೆ ಹೋಗಿ ಒಂದು ಉದಾಹರಣೆಯನ್ನು ಸೃಷ್ಟಿ ಮಾಡುವ ಬದಲು ಕೇಂದ್ರದ ತನಿಖಾ ಸಂಸ್ಥೆಗಳು 23 ವರ್ಷದ ಯುವಕನ ಹಿಂದೆ ಹೋಗುತ್ತಿದೆ. ಕೇವಲ ಆತನ ಹೆಸರಲ್ಲಿ ಉಪನಾಮ ಖಾನ್‌ ಎಂದು ಇದೆ ಎಂಬ ಮಾತ್ರಕ್ಕೆ ಈ ರೀತಿ ಗುರಿಯಾಗಿಸಲಾಗಿದೆ. ಬಿಜೆಪಿಯ ಮತ ಬ್ಯಾಂಕ್‌ಗಾಗಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನ್ಯಾಯದ ಅಪಹಾಸ್ಯ ಮಾಡಲಾಗುತ್ತಿದೆ,” ಎಂದು ಆರೋಪ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ತನ್ನ ಈ ಟ್ವೀಟ್‌ನಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾರ ಪುತ್ರ ಆಶೀಶ್‌ ಮಿಶ್ರಾರನ್ನು ಉದ್ದೇಶಿಸಿ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾರ ಪುತ್ರ ಆಶೀಶ್‌ ಮಿಶ್ರಾ ಇದ್ದ ಕಾರು ರೈತರ ಮೇಲೆ ಹರಿದು ಹೋದ ಕಾರಣದ ಈ ಸಾವುಗಳು ಸಂಭವಿಸಿದೆ ಎಂದು ರೈತರು ಆರೋಪ ಮಾಡಿದ್ದಾರೆ.
ಮುಂಬೈನ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು ಎಂಬ ಖಚಿತ ಮಾಹಿತಿಯ ಮೇರೆಗೆ ಶನಿವಾರ (ಅಕ್ಟೋಬರ್ 2) ರಾತ್ರಿ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಬಾಲಿವುಡ್‌ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ 8ಕ್ಕೂ ಹೆಚ್ಚು ಮಂದಿಯನ್ನು ಎನ್‌ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಐಷಾರಾಮಿ ಹಡಗಿನಲ್ಲಿ ಮಾದಕ ವಸ್ತುಗಳು ಪತ್ತೆಯಾಗಿದ್ದವು. ಹಡಗಿನಲ್ಲಿ ನಡೆಯುವ ರೇವ್ ಪಾರ್ಟಿಗೆ ಬರುವುದಕ್ಕೆ ತಲಾ 80 ಸಾವಿರ ರೂಪಾಯಿ ಶುಲ್ಕ ನಿಗದಿ ಮಾಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು.
ಸದ್ಯ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಪುತ್ರ ಜೈಲಿನಲ್ಲಿ ಇದ್ದು ಜಾಮೀನು ದೊರೆತಿಲ್ಲ. ಮುಂದಿನ ವಿಚಾರಣೆಯು ಬುಧವಾರ ನಡೆಯಲಿದೆ. ಆರ್ಯನ್‌ ಖಾನ್‌ ಬಂಧನವಾದ ಬಳಿಕ ಮೂರನೇ ಬಾರಿಗೆ ಜಾಮೀನನ್ನು ಪಡೆಯುವಲ್ಲಿ ವಿಫಲವಾಗಿದ್ದಾರೆ. ಜಾಮೀನು ಅರ್ಜಿಯು ಬುಧವಾರ ಆಲಿಸಲಾಗುವುದು ಎಂದು ಕೋರ್ಟ್ ಹೇಳಿದೆ. ಬ

ಪ್ರಮುಖ ಸುದ್ದಿ :-   ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement