ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ 700ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಬಸ್ಸುಗಳ ಸಂಚಾರ

ಹುಬ್ಬಳ್ಳಿ: ಅಕ್ಟೋಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬದ ರಜೆಗಳಿರುವುದರಿಂದ ಅಕ್ಟೋಬರ್‌ 14, ಮಹಾನವಮಿ, 15ರಂದು ವಿಜಯದಶಮಿ, 17ರಂದು ಈದ-ಮಿಲಾದ್ 20ರಂದು ಮಹರ್ಷಿ ವಾಲ್ಮಿಕಿ ಜಯಂತಿ ಇರುವುದರಿಂದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 700ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಬಸ್ಸುಗಳನ್ನು ಬೇರೆಬೇರೆ ಪ್ರದೇಶಗಳಿಗೆ ಓಡಿಸುತ್ತಿದೆ.
ಅಕ್ಟೋಬರ್‌ 12 ಮತ್ತು 13ರಂದು ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಒಟ್ಟು 700ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ರಜೆ ಬಳಸಿಕೊಂಡು ಸ್ವಂತ ಊರುಗಳಿಂದ ಬೆಂಗಳೂರು, ಮಂಗಳೂರು, ಹೈದ್ರಾಬಾದ, ಪಣಜಿ ,ಪುಣೆ ಇನ್ನಿತರೆ ಪ್ರಮುಖ ಸ್ಥಳಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಅಕ್ಟೋಬರ್‌ 17 ಮತ್ತು 20ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ಈ ಕುರಿತು ಪ್ರಯಾಣಿಕರು ಮುಂಗಡ ಟಿಕೇಟ್‌ಗಳನ್ನು ksrtc.karnataka.gov.in ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕೋವಿಡ್-19ರ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕೇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement