ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್​ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಸೆಪ್ಟೆಂಬರ್​ 27 ಹಾಗೂ 29ರಂದು ಪೂರಕ ನಡೆದಿತ್ತು. ಪರೀಕ್ಷೆಯಲ್ಲಿ ಒಟ್ಟು 53,155 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ರಾಜ್ಯವು 55.54 ಪ್ರತಿಶತ ಫಲಿತಾಂಶ ದಾಖಲಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಹೇಳಿದ್ದಾರೆ.
ವಿದ್ಯಾರ್ಥಿಗಳು http:/.sslc.Karnataka.gov.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಸೆಪ್ಟೆಂಬರ್​ 27 ಹಾಗೂ 29ರಂದು ಶಿಫ್ಟ್​ ಮಾದರಿಯಲ್ಲಿ ಎಸ್​ಎಸ್​​ಎಲ್​ಸಿ ಪೂರಕ ಪರೀಕ್ಷೆ ನಡೆಸಲಾಗಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳ ಪರೀಕ್ಷೆ ಮಾಡಲಾಗಿತ್ತು. ಹಾಗೂ ಬಹು ಆಯ್ಕೆ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳೀಕೃತ ಮಾದರಿಯಲ್ಲಿ ಪರೀಕ್ಷೆಗಳು ನಡೆದಿದ್ದವು.

0 / 5. 0

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement