ಶುಲ್ಕ ಕಟ್ಟಿಲ್ಲವೆಂದು ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಅವಕಾಶ ಸಿಗದ ವಿದ್ಯಾರ್ಥಿನಿಗೆ ಪೂರಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ..!

ಬೆಂಗಳೂರು: ಇಂದು (ಸೋಮವಾರ, ಅ.11) ಎಸ್ಎಸ್ಎಲ್​ಸಿ (SSLC) ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 599 ಅಂಕಗಳೊಂದಿಗೆ ಉತ್ತೀರ್ಣ ಹೊಂದಿರುವ ಗ್ರೀಷ್ಮಾ ನಾಯ್ಕ್ ಪೂರಕ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.
ಮೂಡಬಿದರಿಯ ಆಳ್ವಾಸ್ ​ ಕಾಲೇಜಿನ ವಿದ್ಯಾರ್ಥಿನಿ ಗ್ರೀಷ್ಮಾ ನಾಯ್ಕ್ 599 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಫೀಸ್ ಕಟ್ಟಿಲ್ಲವೆಂದು ವಿದ್ಯಾರ್ಥಿನಿಗೆ ಪರೀಕ್ಷೆಗೆ ನೋಂದಣಿ ಮಾಡಿರಲಿಲ್ಲ. ಮೂಡಬಿದರಿಯ ಆಳ್ವಾಸ್ ಕಾಲೇಜು ಪರೀಕ್ಷೆಗೆ ನೋಂದಣಿ ಮಾಡದ ಹಿನ್ನೆಲೆ ಮೊದಲ ಪ್ರಯತ್ನದ ಪರೀಕ್ಷೆಯಿಂದ ವಿದ್ಯಾರ್ಥಿನಿ ಗ್ರೀಷ್ಮಾ ನಾಯ್ಕ್ ವಂಚಿತಳಾಗಿದ್ದರು. ಆದರೆ ಪೂರಕ ಪರೀಕ್ಷೆ ಬರೆದಿದ್ದು, 599 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ.
ಪರೀಕ್ಷೆ ಬರೆಯಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಇದು ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿ ಅಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿನಿ ಮನೆಗೆ ಹೋಗಿದ್ದರು. ಗ್ರೀಷ್ಮಾಗೆ ಸಮಾಧಾನ ಹೇಳಿ ಪೂರಕ ಪರೀಕ್ಷೆಗೆ ಅವಕಾಶ ನೀಡುವ ವಾಗ್ದಾನ ಮಾಡಿದ್ದರು. ಅದರಂತೆ ಗ್ರೀಷ್ಮಾ ನಾಯ್ಕ್‌ ಪೂರಕ ಪರೀಕ್ಷೆ ಬರೆದಿದ್ದರು.

ಪ್ರಮುಖ ಸುದ್ದಿ :-   ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement