ಗಡಿಕೇಶ್ವಾರ: ಸಿದ್ದರಾಮಯ್ಯ ಮಾತನಾಡುತ್ತಿರುವಾಗಲೇ ಕಂಪಿಸಿದ ಭೂಮಿ

posted in: ರಾಜ್ಯ | 0

ಕಲಬುರಗಿ: ಭೂಕಂಪನದ ಆತಂಕದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಧೈರ್ಯ ತುಂಗಿಹಾಗೂ ಆಹವಾಲು ಆಲಿಸಿ ಜರನ್ನುದ್ದೇಶಿಸಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿದ ಅನುಭವವಾಗಿದೆ.
ಕೆಲವು ದಿನಗಳಿಂದ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವಾರ ಗ್ರಾಮ ಹಾಗೂ ಸುತ್ತ ಮುತ್ತ ಗ್ರಾಮ ಭೂಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಗಡಿಕೇಶ್ವಾರ ಗ್ರಾಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಅವರು ಜನರನ್ನುದ್ದೇಶಿಸಿ ಮಾತನಾಡುತ್ತಿರುವಾಗಲೇ ಭೂಕಂಪನದ ಅನುಭವ ಉಂಟಾಯಿತು.
ಆದರೂ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಜನರು ಭಯದಿಂದ ಗ್ರಾಮ ಖಾಲಿ ಮಾಡಿ ಗುಳೆ ಹೋಗಿದ್ದಾರೆ. ನನಗೂ ಭೂಕಂಪದ ಶಬ್ದದ ಅನುಭವವಾಯಿತು. ಸರ್ಕಾರ ಜನರ ಸ್ಥಿತಿಯನ್ನು ಉದಾಸೀನವಾಗಿ ಕಾಣುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಕೆಲ ದಿನಗಳಿಂದ ಕಲಬುರಗಿಯಲ್ಲಿ ಭೂಕಂಪನವಾಗುತ್ತಿದ್ದು ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ಭೂಕಂಪನದಿಂದ ಅನೇಕ ಮನೆಗಳು ಕುಸಿದಿವೆ. ಗ್ರಾಮಸ್ಥರು ಹೆದರಿದ್ದಾರೆ. ಹೀಗಾಗಿ ಸ್ಥಳದಿಂದಲೇ ಕಂದಾಯ ಸಚಿವ ಅಶೋಕ್ ಅವರಿಗೆ ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ ಅವರು ಪರಿಹಾರ ಕಾರ್ಯವನ್ನು ತುರ್ತಾಗಿ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯಸಿಂಗ್, ಮಾಜಿ ಶಾಸಕ ಬಿ.ಆರ್. ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್ ಮೊದಲಾದವರಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ