ಮನೆಯಲ್ಲಿ ಆರು ಜನ ಇದ್ದರೂ ಈ ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಒಂದು ಮತ..!

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ತನ್ನ ಬಲ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ತಮಿಳುನಾಡಿನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಚುನಾವಣೆಯಲ್ಲಿ ಕೇವಲ ಒಂದೇ ಒಂದಉ ಮತ ಪಡೆದಿರುವುದೇ ಸಾಕ್ಷಿಯಾಗಿದೆ.
ಕುಟುಂಬದಲ್ಲಿ ಆರು ಸದಸ್ಯರಿದ್ದರೂ ತನ್ನದೇ ಒಂದು ಮತ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.
ಇತ್ತೀಚೆಗೆ ನಡೆದ ಕೊಯಮತ್ತೂರು ಜಿಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪೇರಿನಾಯಕನ್‌ಪಾಳ್ಯಂ ಪಂಚಾಯತ್ ಕ್ಷೇತ್ರದ 9 ನೇ ವಾರ್ಡ್‌ಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಕಾರ್ತಿಕ್ ಎನ್ನುವರು ಒಂದೇ ಒಂದು ಮತ ಗಳಿಸಿದ್ದಾರೆ. ಗಮನಾರ್ಹವೆಂದರೆ ಕಾರ್ತಿಕ್ ಕುಟುಂಬದಲ್ಲಿ ಅವರ ಪತ್ನಿಯೂ ಸೇರಿದಂತೆ ಆರು ಜನ ಇದ್ದಾರೆ.
ಅರುಳ್‌ರಾಜ್ ಡಿಎಂಕೆಯಿಂದ, ವೈಥಿಯಾಲಿಂಗಂ ಎಐಎಡಿಎಂಕೆಯಿಂದ, ರವಿ ಕುಮಾರ್ ತೇಮುಜಿನ್ ಪಕ್ಷದಿಂದ, ಕಾರ್ತಿಕ್ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದರು. ಕಣದಲ್ಲಿ ಪಕ್ಷೇತರ ಅಭ್ಯರ್ಥಿ ಜಯರಾಜ್ ಸೇರಿದಂತೆ ವಿವಿಧ ಪಕ್ಷಗಳ 6 ಅಭ್ಯರ್ಥಿಗಳಿದ್ದರು.
1,551 ಮತಗಳಲ್ಲಿ 991 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ ಡಿಎಂಕೆಯ ಅರುಳ್‌ರಾಜ್ 387 ಮತ, ಪಕ್ಷೇತರ ಅಭ್ಯರ್ಥಿ ಜಯರಾಜ್ 240 ಮತ ಪಡೆದಿದ್ದಾರೆ. ವೈಥಿಯಾಲಿಂಗಂ 198 ಮತ ಪಡೆದಿದ್ದರೆ, 3 ಮತಗಳು ತೀರಸ್ಕೃತಗೊಂಡಿವೆ. ಕಾಂಗ್ರೆಸ್ ಅಭ್ಯರ್ಥಿ 84 ಮತ ಪಡೆದಿದ್ದರು. ಕಾರ್ತಿಕ್ 1 ಮತ ಪಡೆದಿದ್ದಾರೆ.
ಕಾರ್ತಿಕ್ ಅವರು ಕೊಯಮತ್ತೂರು ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರು ಕೂಡ ಹೌದು. ಬಿಜೆಪಿಯಂತಹ ರಾಷ್ಟ್ರೀಯ ಪಕ್ಷದಲ್ಲಿದ್ದರೂ ಕೇವಲ ಒಂದು ಮತ ಪಡೆದ ಕಾರ್ತಿಕ್ ಅವರನ್ನು ಹಾಗೂ ಬಿಜೆಪಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಟ್ರೋಲ್ ಮಾಡುತ್ತಿದ್ದಾರೆ. ಅವರ ಮನೆಯವರೇ ಅವರಿಗೆ ಮತ ಹಾಕಿಲ್ಲ ಎಂದು ಲೇವಡಿ ವಾಡುತ್ತಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement
ಓದಿರಿ :-   ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಪಾಕಿಸ್ತಾನಿ ಸಹೋದರಿ: 2024ರ ಚುನಾವಣೆ ಗೆಲುವಿಗೆ ಶುಭಹಾರೈಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement